Breaking News

ಸರ್ವರ್ಕರ್ ಸಾಮ್ರಾಜ್ಯ..

Cnewstv.in / 23.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಸರ್ವರ್ಕರ್ ಸಾಮ್ರಾಜ್ಯ..

ಶಿವಮೊಗ್ಗ : ಶ್ರೀಗಂಧ ಹಾಗೂ ಸಾಮಗಾನ ಸಂಸ್ಥೆ ಸಹಭಾಗಿತ್ವದಲ್ಲಿ ನಗರದ ಸೈನ್ಸ್ ಮೈದಾನದಲ್ಲಿ ಸಾರ್ವರ್ಕರ್ ಸಾಮ್ರಾಜ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

1944 ರಲ್ಲಿ ವೀರ ಸಾವರ್ಕರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ ನೆನಪಿಗಾಗಿ ಸಾರ್ವರ್ಕರ್ ಸಾಮ್ರಾಜ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ನಗರದ ಬಸ್ ನಿಲ್ದಾಣದಿಂದ ಸೈನ್ಸ್ ಮೈದಾನದವರೆಗೆ ಬೈಕ್ ರಾಲಿ ನಡೆಸಲಾಯಿತು.‌‌ರ್ಯಾಲಿಯಲ್ಲಿ ಹಿಂದೂ ಕಾರ್ಯಕರ್ತರು ಕೇಸರಿ ಧ್ವಜ, ಸರ್ವರ್ಕರ್ ಭಾವಚಿತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಕಾರ್ಯಕ್ರಮದಲ್ಲಿ ಸಹಸ್ರ ಕಂಠದಲ್ಲಿ ಸಾವಿರಾರು ಮಹಿಳೆಯರು ರಾಷ್ಟ್ರಭಕ್ತಿ ಗೀತೆಗಳ ಗಾಯನವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಸಾರ್ವರ್ಕರ್ ಮೊಮ್ಮಗ ಸಾತ್ಯಕಿ ಸರ್ವರ್ಕರ್, ರಾಷ್ಟ್ರೀಯವಾದಿ ಚಿಂತಕಿ ಶ್ರೀ ಲಕ್ಷ್ಮಿ , ಕೆ ಈ ಕಾಂತೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನು ಓದಿ :

http://cnewstv.in/?p=11298

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*