Breaking News

ಚಾಕುವಿನಿಂದ ಇರಿದು ಯುವಕನ ಹತ್ಯೆ.‌

Cnewstv.in / 25.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಚಾಕುವಿನಿಂದ ಇರಿದು ಯುವಕನ ಹತ್ಯೆ.‌

ಶಿವಮೊಗ್ಗ : ನಗರದಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ‌ವೆಂಕಟೇಶ್ ನಗರದ 1 ನೇ ತಿರುವಿನ ಮನೆಯೊಂದರ ಮುಂದೆ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಮೃತನನ್ನು ವಿಜಯ್ (37) ಎಂದು ಗುರುತಿಸಲಾಗಿದ್ದು ಈತ ಶಿವಮೊಗ್ಗದ ಖಾಸಗಿ ಕ್ಲಿನಿಕ್ ಒಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ.‌ ಗಾಂಧಿನಗರದ ನಿವಾಸಿಯಾಗಿದ್ದ ಈತ ನಿನ್ನೆ ರಾತ್ರಿ ಆಸ್ಪತ್ರೆಯಿಂದ ಕರೆ ಬಂದಿದೆ ಎಂದು ಮನೆಯಿಂದ ಹೊರ ಬಂದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಕೆಲವು ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಲಭ್ಯವಾಗಿದೆ.‌ ವೈಯಕ್ತಿಕ ಕಾರಣದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ

ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ :

http://cnewstv.in/?p=11298

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*