Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಅಂಟಿಗೆ ಪಿಂಟಿಕೆಯಲ್ಲಿ ಅಪ್ಪು ನೆನಪು. ವೀಡಿಯೋ ವೈರಲ್..
ಶಿವಮೊಗ್ಗ : ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರಚಲಿತದಲ್ಲಿರುವ ಸಂಪ್ರದಾಯಗಳಲ್ಲಿ ಆಂಟಿಕೆ – ಪಿಂಟಿಕೆ ಕೂಡ ಒಂದು.ದೀಪಾವಳಿಯ ಬಲಿಪಾಡ್ಯಮಿ ದಿನದಿಂದ ಹಿಡಿದು ಮೂರು ಅಥವಾ ನಾಲ್ಕು ದಿನಗಳವರೆಗೆ ಹಳ್ಳಿಯ ರೈತರು (ಒಕ್ಕಲಿಗರು ದೇವರು, ಹಸಲರು ಮುಂತಾದ ವರ್ಗಗಳವರು) ಮನೆ ಮನೆಗೂ ದೀಪಾವಳಿಯ ಬೆಳಕಿನ ದಿವ್ಯ ಸಂದೇಶವನ್ನು ಒಯ್ಯುತ್ತ ಜ್ಯೋತಿ ಹಚ್ಚಿ ಹೀಗೆ ಹಾಡುತ್ತಾರೆ.
ಅಂಟಿಕೆ ಪಿಂಟಿಕೆಯನ್ನು ಹಬ್ಬ ಹಾಡುವುದು, ದೀಪ ನೀಡುವುದು ಎಂಬ ಹೆಸರುಗಳೂ ಇವೆ. ತೀರ್ಥಹಳ್ಳಿಯ ಸುತ್ತಮುತ್ತ ಮಾತ್ರ ಇದಕ್ಕೆ ಅಂಟಿಕೆ ಪಂಟಿಕೆ ಎನ್ನುತ್ತಾರೆ.
ಶಿವಮೊಗ್ಗದ ಪುರದಾಳು ಗ್ರಾಮದಲ್ಲಿ ನಡೆದ ಅಂಟಿಕೆ ಪೀಠಿಕೆಯಲ್ಲಿ ನಟ ಪುನೀತ್ ರಾಜ್ ಕುಮಾರ್ ಅಭಿನಯದ ಗೊಂಬೆ ಹೇಳುತೈತೆ ಹಾಡನ್ನು ಹೇಳುವುದರ ಮೂಲಕ ಅಪ್ಪುಗೆ ನಮನವನ್ನು ಸಲ್ಲಿಸಲಾಯಿತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನು ಒದಿ : http://cnewstv.in/?p=11341
Recent Comments