Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮಲೆನಾಡಿನಲ್ಲಿ ಕೋಟಿಕಂಠ ಗಾಯನ
ಶಿವಮೊಗ್ಗ : ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮದಲ್ಲಿ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅವರು ಕನ್ನಡ ಗೀತೆಗಳ ಗಾಯನಕ್ಕೆ ದನಿಗೂಡಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ನಗರದ ವಿವಿಧ ಕನ್ನಡ ಸಂಘಟನೆಗಳು, ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಕನ್ನಡದ ಗೀತೆಗಳನ್ನು ಹಾಡಿದರು.
ಕಾರ್ಯಕ್ರಮದಲ್ಲಿ ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು ಹಾಡಲಾಯಿತು. ಜಿಲ್ಲೆಯಲ್ಲಿ ಕೋಟಿ ಕಂಠ ಗಾಯನಕ್ಕಾಗಿ ಒಟ್ಟು 3.33 ಲಕ್ಷ ಜನರು ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಸಂಕಲ್ಪವನ್ನು ಬೋಧಿಸಲಾಯಿತು. ಶಾಸಕರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ,
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.