Breaking News

ಗಂಧದ ಗುಡಿ ಚಿತ್ರದ ಟಿಕೆಟ್ ದರದಲ್ಲಿ ಭಾರೀ ಇಳಿಕೆ.

Cnewstv / 07.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಗಂಧದ ಗುಡಿ ಚಿತ್ರದ ಟಿಕೆಟ್ ದರದಲ್ಲಿ ಭಾರೀ ಇಳಿಕೆ.

ಬೆಂಗಳೂರು : ಪವರ್ ಸ್ಟಾರ್ ಡಾ. ಪುನೀತ್ ರಾಜ್‍ಕುಮಾರ್ ನಟನೆಯ ಸಾಕ್ಷ್ಯ ಚಿತ್ರ ಗಂಧದಗುಡಿ ಟಿಕೆಟ್ ದರದಲ್ಲಿ ಭಾರಿ ಇಳಿಕೆ ಮಾಡಲಾಗಿದೆ.

ಅಪ್ಪು ಅಭಿನಯದ ಕೊನೆಯ ಚಿತ್ರ ಹಾಗೂ ಅವರ ಕನಸಿನ ಸಿನಿಮಾವಾದ ಗಂಧದಗುಡಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಾಡಿನ ಪ್ರಕೃತಿ ಸೌಂದರ್ಯ, ಸಸ್ಯ ಸಂಪತ್ತನ್ನು ತೋರಿಸುವ ಈ ಸಿನಿಮಾವನ್ನು ಎಲ್ಲರೂ ನೋಡಬೇಕು ಎಂಬ‌ ಉದ್ದೇಶದಿಂದ PRK ಸಂಸ್ಥೆ ಮಹತ್ವದ ನಿರ್ಧಾರವನ್ನು
ತೆಗೆದುಕೊಂಡಿದೆ.

7 ದಿನಗಳಿಂದ ನಿಂತೇ ಇರುವ ಹೋರಿ.

ಈ ಬಗ್ಗೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಸಾಮಾಜಿಕ ಮಾಧ್ಯಮದ ಮೂಲಕ ಮಾಹಿತಿ ಹಚ್ಚಿಕೊಂಡಿದ್ದಾರೆ. ಇಂದಿನಿಂದ ( ನವೆಂಬರ್ 7 ರಿಂದ 10 ರ ವರೆಗೆ ) 4 ದಿನಗಳ ಕಾಲ ಟಿಕೆಟ್ ದರವನ್ನು ಕಡಿಮೆ ಮಾಡಲಾಗಿದೆ.

ಗಂಧದಗುಡಿ ಅಪ್ಪು ರವರ ಒಂದು ಕನಸು ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ, ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು ವಿಶೇಷವಾಗಿ ಮಕ್ಕಳು ನೋಡಬೇಕೆಂಬುದು, ಈ ಸಲುವಾಗಿ ನಾನು ಹಾಗೂ ಚಿತ್ರ ತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ  ಸಹಕಾರದೊಂದಿಗೆ ನಮ್ಮ ಚಿತ್ರ ಗಂಧದಗುಡಿಯನ್ನು 07-11-2022 ಸೋಮವಾರದಿಂದ 10-11-2022 ಗುರುವಾರದವರೆಗೂ ಏಕ ಪರದೆಗಳು ಥಿಯೇಟರ್ ಗಳಲ್ಲಿ (56/- ರೂ.ಗಳಿಗೆ ಹಾಗೂ ಮಲ್ಟಿಪ್ಲೆಕ್ಸ್ ಗಳಲ್ಲಿ 112/- ರೂ ಗಳಿಗೆ ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿ ಯನ್ನು
ತೋರಿಸೋಣ.

ಇದನ್ನು ಒದಿ :  https://cnewstv.in/?p=11441

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*