Breaking News

ಪ.ಪಂ.ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ.

Cnewstv / 08.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪ.ಪಂ.ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ.

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2022-23ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ 4 ಗುರಿಗಳನ್ನು ನಿಗದಿಪಡಿಸಿದ್ದು, ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿಕೈಗಾರಿಕೆ ಇತ್ಯಾದಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಪಡೆಯಲು ಆರ್ಥಿಕವಾಗಿ ಹಿಂದುಳಿದ ಅರ್ಹ ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

https://cnewstv.in/?p=11466

ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, 18-55 ವರ್ಷ ವಯೋಮಿತಿಯೊಳಗಿರಬೇಕು. ಕುಟುಂಬ ವಾರ್ಷಿಕ ಆದಾಯ 2.00 ಲಕ್ಷಗಳನ್ನು ಮೀರಿರಬಾರದು. ಈ ಯೋಜನೆಯ ಫಲಾನುಭವಿಗಳಿಗೆ ಉದ್ಯಮಶೀಲತಾ ತರಬೇತಿ ಕಡ್ಡಾಯವಾಗಿರುತ್ತದೆ.

ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿರಸ್ತೆ, ಆಲ್ಕೋಳ, ಶಿವಮೊಗ್ಗ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ/ಆಧಾರ್ ಕಾರ್ಡ್, ಯೋಜನಾ ವರದಿ, ತರಬೇತಿ ಅಥವಾ ಅನುಭವ ಪತ್ರ, 3 ಭಾವಚಿತ್ರಗಳನ್ನು ಲಗತ್ತಿಸಿ ದಿ: 19/11/2022 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 9482031284 /9901755700 ಗಳನ್ನು ಸಂಪರ್ಕಿಸುವುದು.

ಇದನ್ನು ಒದಿ : https://cnewstv.in/?p=11466

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*