Breaking News

ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಮತದಾರರಲ್ಲಿ ಮನವಿ.

Cnewstv / 10.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಮತದಾರರಲ್ಲಿ ಮನವಿ.

ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಕ್ಕೆ ಸಂಬಂಧಿಸಿದಂತೆ, 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗಳನ್ನು ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ವಿತರಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ದಿನಾಂಕ: 12-11-2022, 20-11-2022, 03-12-2022 ಹಾಗೂ 04-12-2022 ರಂದು ತಮ್ಮ ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಹಾಜರಿದ್ದು ಕಾರ್ಯ ನಿರ್ವಹಿಸಲಿದ್ದಾರೆ.

“ಸಂವಿಧಾನ -ಸಾಮಾಜಿಕ ನ್ಯಾಯ” ವಿಚಾರ ಸಂಕೀರ್ಣ ಮತ್ತು ಪುಸ್ತಕ ಬಿಡುಗಡೆ.

ಈ ಸಂದರ್ಭದಲ್ಲಿ ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಹಾಜರಾಗಿ ತಮ್ಮ ಹೆಸರು ಹಾಗೂ ತಮ್ಮ ಕುಟುಂಬದ ಇತರೆ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿದೆ.

ಯಾವುದೇ ನ್ಯೂನತೆ ಇದ್ದಲ್ಲಿ ಸರಿಪಡಿಸಲು ನಮೂನೆ-8 ರಲ್ಲಿ ಅಥವಾ ಮತದಾರರು ತಮ್ಮ ಮೊಬೈಲ್‍ನ VOTER HELPLINE (VHL) ನಲ್ಲಿ ನಮೂನೆ-8 ರಲ್ಲಿ ಸರಿಪಡಿಸಿಕೊಳ್ಳಲು ಅವಕಾಶವಿದೆ. ಕ್ಲೈಮು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 09-11-2022 ರಿಂದ 08-12-2022 ರವರೆಗೆ ಅವಕಾಶವಿರುತ್ತದೆ. ಮತದಾರರು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕೆಂದು 113-ಶಿವಮೊಗ್ಗ ವಿಧಾನಸಭಾ ಕಷೇತ್ರದ ಮತದಾರರ ನೋಂದಣಾಧಿಕಾರಿಗಳು ಹಾಗೂ ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತರಾದ ಕೆ.ಮಾಯಣ್ಣಗೌಡ ಕೋರಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ

Leave a Reply

Your email address will not be published. Required fields are marked *

*