Cnewstv / 10.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜ್ಯದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆ ಮಾಡಿರುವುದು ನಮ್ಮ ಸರ್ಕಾರ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ.
ಬೆಂಗಳೂರು : ಕರ್ನಾಟಕದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆಯಾಗಿರುವುದು ನಮ್ಮ ಸರ್ಕಾರದ ಅವಧಿಯಲ್ಲಿ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಿಯೋಗವು ಇಂದು ಮುಖ್ಯ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದರು.
ಕೆಳಹಂತದವರೆಗೆ ಈ ಕೆಲಸ ಆಗಬೇಕು. ಮುಂದಿನ ಕೆಲಸಗಳನ್ನು ನನಗೆ ಬಿಡಿ. ಎಲ್ಲರೂ ಒಂದಾಗಿ ಸುಭಿಕ್ಷ ನಾಡನ್ನು ಕಟ್ಟೋಣ. ಪ್ರಾಮಾಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿ. ಬಡವರಿಗೆ, ಜನಪರವಾದ ಕೆಲಸ ಮಾಡಿದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ನವ ಕರ್ನಾಟಕ ದಿಂದ ನವ ಭಾರತ ನಿರ್ಮಿಸೋಣ ಎಂದರು. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡಬೇಕು. ಕರ್ನಾಟಕದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆಯಾಗಿರುವುದು ನಮ್ಮ ಸರ್ಕಾರದ ಅವಧಿಯಲ್ಲಿ. ಪ್ರತಿ ದಿನ ಒಂದು ತಾಸು ಹೆಚ್ಚು ಕೆಲಸ ಮಾಡಿ ಎಂದು ಸರ್ಕಾರಿ ನೌಕರರಿಗೆ ಕರೆ ನೀಡಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
“ಸಂವಿಧಾನ -ಸಾಮಾಜಿಕ ನ್ಯಾಯ” ವಿಚಾರ ಸಂಕೀರ್ಣ ಮತ್ತು ಪುಸ್ತಕ ಬಿಡುಗಡೆ.
C News TV Kannada News Online in cnewstv