Cnewstv / 12.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪೊಲೀಸ್ ವಿಚಾರಣೆ ವೇಳೆ ವ್ಯಕ್ತಿ ಸಾವು.
ಬೆಳಗಾವಿ : ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ಒಳಗಾದ ವ್ಯಕ್ತಿ ಪೊಲೀಸ್ ಕಸ್ಟಡಿ ವೇಳೆ ಮೃತಪಟ್ಟ ಪ್ರಕರಣ ಶುಕ್ರವಾರ ರಾತ್ರಿ ಸಂಭವಿಸಿದೆ.
ರಾಜ್ಯದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆ ಮಾಡಿರುವುದು ನಮ್ಮ ಸರ್ಕಾರ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ.
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರಗೌಡ ಪಾಟೀಲ್ (46) ಮೃತಪಟ್ಟ ವ್ಯಕ್ತಿ. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸನಗೌಡನನ್ನು ಬೆಳಗಾವಿ ಗ್ರಾಮೀಣ ಪೊಲೀಸರು ಕರೆತಂದಿದ್ದರು. ಆಗ ವಿಚಾರಣೆ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬಸನಗೌಡ ಪಾಟೀಲ್ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದ ಕೂಡಲೇ ಈತನನ್ನು ವಿಚಾರಣೆಗೆ ಕರೆತಂದಿದ್ದರು. ಅಗ ಈತನಿಗೆ ವಾಂತಿ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರೆ ಚಿಕಿತ್ಸೆ ಫಲಿಸದೇ ಸಾವನ್ನಪಿದ್ದಾರೆ.
ಮೃತನ ಪತ್ನಿಯಿಂದ ದೂರು ಪಡೆದುಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಬೆಂಗಳೂರು ಸಿಐಡಿಗೆ ನೀಡಲಾಗುವುದು ಎಂದು ಡಿಸಿಪಿ ರವೀಂದ್ರ ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399