Breaking News

ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರು ಪಾಲು.

Cnewstv / 15.11.2022 / ನವದೆಹಲಿ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರು ಪಾಲು.

ನವದೆಹಲಿ : ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗುಜರಾತ್‌ನ ಕಚ್ ಜಿಲ್ಲೆಯ ಗುಂಡ್ಲಾ ಗ್ರಾಮದ ಹತ್ತಿರ ನಡೆದಿದೆ.

ನರ್ಮದಾ ನದಿ ಕಾಲುವೆಯ ದಡದಲ್ಲಿ ಒಂದೇ ಕುಟುಂಬದ ಸದಸ್ಯರು ಕುಳಿತಿದ್ದರು ಈ ವೇಳೆ ಕುಟುಂಬದ ಮಹಿಳಾ ಸದಸ್ಯರೊಬ್ಬರು ನೀರು ತುಂಬಿಸಿಕೊಳ್ಳಲು ಕೆಳಗೆ ಇಳಿದಿದ್ದಾರೆ ಈ ವೇಳೆ ಮಹಿಳೆ ಕಾಲು ಜಾರಿ ಬಿದ್ದಿದ್ದಾಳೆ ಆಕೆಯನ್ನ ರಕ್ಷಿಸಲು ಕುಟುಂಬದ ಉಳಿದ ನಾಲ್ಕು ಸದಸ್ಯರು ನೀರಿಗೆ ಜಿಗಿದಿದ್ದಾರೆ ಆದರೆ ದುರದೃಷ್ಟವಶಾತ್ ಯಾರಿಗೂ ಈಜು ಬರದ ಕಾರಣ ಎಲ್ಲರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ವಿದ್ಯುತ್ ಬಿಲ್ ಬಾಕಿ ಇದೆ” ಸೈಬರ್ ವಂಚಕರ ಹೊಸ ಪ್ಲಾನ್.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿಗಳು ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಎಂದು ಆಸ್ಪತ್ರೆಗೆ ಸಾಗಿಸಲಾಗಿದೆ‌. ಪ್ರಾಗ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲೆಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*