Cnewstv / 25.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕರು ಹೃದಯಾಘಾತದಿಂದ ನಿಧನ.
ಬೆಂಗಳೂರು : ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿಯೇ ಮಾಜಿ ಶಾಸಕರು ಹೃದಯಘಾತದಿಂದ ನಿಧನರಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರೋಣ – ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದನೂರು ಅವರು ಸಭೆಯಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದ್ದಾರೆ.
2023ರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರೋಣ ಅಥವಾ ಗದಗ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಬಯಸಿದ್ದು ಟಿಕೆಟ್ ಆಕಾಂಕ್ಷಿಗಳ
ಸಭೆಗೆ ಭಾಗವಹಿಸಿದ್ದರು.
https://cnewstv.in/?p=11569
ಶ್ರೀಶೈಲಪ್ಪ ಬಿದನೂರು ಗದಗ ಮತ್ತು ರೋಣ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು, ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. 1998 ರಲ್ಲಿ ರೋಣ ಕ್ಷೇತ್ರದಿಂದ ಜನತಾ ಪಕ್ಷದ ಚುನಾಯಿತರಾಗಿದ್ದರು. 2018 ರಲ್ಲಿ ಬಿಜೆಪಿ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಿಕ್ಕಿರಲಿಲ್ಲ ಹಾಗಾಗಿ 2019 ರಲ್ಲಿ ಕಾಂಗ್ರೆಸ್ ಪಕ್ಷವನ್ನ ಸೇರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399