Breaking News

ಡಿ.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ಡಾ. ಆರ್.ಸೆಲ್ವಮಣಿ

Cnewstv / 01.12.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಡಿ.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ಡಾ. ಆರ್.ಸೆಲ್ವಮಣಿ

ಶಿವಮೊಗ್ಗ : ಡಿಸೆಂಬರ್ 17 ಮತ್ತು 18ರಂದು ನಗರದ 4-5 ಸಮಾನಾಂತರ ವೇದಿಕೆಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.

Shivamogga : Jobs Available for Ladies!!!

ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾಕೂಟದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರತಿನಿತ್ಯ ಕೆಲಸ-ಕಾರ್ಯಗಳ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ನೌಕರರು ಹಾಗೂ ಕಚೇರಿ ಸಿಬ್ಬಂಧಿಗಳು ತಮ್ಮ ಒತ್ತಡದ ಕೆಲಸದಿಂದ ಮುಕ್ತರಾಗಿ ಆಟೋಟಗಳಲ್ಲಿ ಭಾಗವಹಿಸಿ, ಮನಸ್ಸಂತೋಷ ಕಂಡುಕೊಳ್ಳುವ ಸದುದ್ದೇಶದಿಂದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಅಲ್ಲದೇ ನೌಕರರಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆ ದೊರೆಯಲಿದೆ ಎಂದು ಅವರು ತಿಳಿಸಿದರು.

ನಡೆಯುವ ಎಲ್ಲಾ ಕ್ರೀಡೆಗಳು ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತ ನೌಕರರೆಲ್ಲರಿಗೂ ಅವಕಾಶ ದೊರೆಯಲಿದೆ. ಈ ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಗುಂಪು ಮತ್ತು ವೈಯಕ್ತಿಕ ಸ್ಪರ್ಧೆಗಳನ್ನು ನಡೆಸಲಾಗುವುದು. ಕ್ರೀಡೆಯಲ್ಲಿ ವಿಜೇತರಾದ ಹಾಗೂ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದ ಅವರು, ಭಾಗವಹಿಸಲಿರುವ ಸುಮಾರು 3,000ಕ್ಕೂ ಹೆಚ್ಚಿನ ಸ್ಪರ್ಧಾಳುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಆಟೋಟ, ಊಟೋಪಹಾರ, ವೇದಿಕೆ ನಿರ್ವಹಣೆ, ಮೇಲುಸ್ತುವಾರಿ, ಸ್ವಾಗತ ಸಮಿತಿ ಮುಂತಾದವುಗಳಿಗಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳನ್ನೊಳಗೊಂಡ ಹಲವು ಸಮಿತಿಗಳನ್ನು ರಚಿಸಲಾಗುವುದು. ಕಾರ್ಯಕ್ರಮದ ಉದ್ಘಾಟನೆಗೆ ನಿಯಮಾನುಸಾರ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳನ್ನು ಆಹ್ವಾನಿಸಲಾಗುವುದು ಎಂದರು.

ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ನಗರದ ಕುವೆಂಪು ರಂಗಮಂದಿರ, ಬಿ.ಆರ್.ಅಂಬೇಢ್ಕರ್ ಭವನ, ನೌಕರರ ಸಂಘ, ನೆಹರೂ ಕ್ರೀಡಾಂಗಣ, ಎನ್.ಇ.ಎಸ್.ಮೈದಾನ ಸೇರಿದಂತೆ ಹಲವು ಸಮನಾಂತರ ವೇದಿಕೆ-ಮೈದಾನಗಳಲ್ಲಿ ನಡೆಯಲಿವೆ ಎಂದ ಅವರು, ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ತೀರ್ಪುಗಾರರಾಗಿ ತಜ್ಞರನ್ನು ನಿಯೋಜಿಸಲಾಗುವುದು. ಎರಡು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟದ ದಿನದಂದು ಪ್ರತಿದಿನ ಸಂಜೆ ಕಲಾವಿದರನ್ನು ಆಹ್ವಾನಿಸಿ ರಸಸಂಜೆ ಹಾಗೂ ಮನೋರಂಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments