Breaking News

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ.

Cnewstv / 02.12.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ.

ಶಿವಮೊಗ್ಗ : ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಇಂದು ಮುಂಜಾನೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.

ಇದನ್ನು ಒದಿ : https://cnewstv.in/?p=11600

ಶಿವಮೊಗ್ಗ ತಾಲೂಕಿನ ಹರಮಘಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಗಂಡು ಚಿರತೆಯೆಂದು ಇಂದು ಮುಂಜಾನೆ ಬಿದ್ದಿದ್ದು ಆ ಚಿರತೆಯನ್ನು ನೋಡಲು ಜನಸಾಗರವೇ ಹರಿದು ಬರುತ್ತಿದೆ.

ಹರಮಘಟ್ಟ ಸುತ್ತಮುತ್ತ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಈ ಚಿರತೆ ಮೂರು ದನಗಳನ್ನು ತಿಂದು ಮುಗಿಸಿತ್ತು. ಹೀಗಾಗಿ ಭಯಭೀತಗೊಂಡ ಗ್ರಾಮಸ್ಥರು ಚಿರತೆಯನ್ನು ಹಿಡಿಯುವಂತೆ ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದ್ದರು.

ಇಂದು ಮುಂಜಾನೆ ಹರಮಘಟ್ಟದ ಸಮೀಪ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದು, ಚಿರತೆಗೆ ಚಿಕಿತ್ಸೆ ಕೊಡಿಸಿ ಮುಂದಿನ ನಿರ್ಣಯವನ್ನು ತೆಗೆದುಕೊಳ್ಳಲಿದ್ದಾರೆ. ಇನ್ನು ಸೆರೆ ಸಿಕ್ಕಿರುವ ಚಿರತೆಯನ್ನು ನೋಡಲು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=11596

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*