Breaking News

ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್. 6 ಸಾವು, 10 ಮಂದಿಗೆ ಗಾಯ.

Cnewstv / 05.12.2022 / ನವದೆಹಲಿ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್. 6 ಸಾವು, 10 ಮಂದಿಗೆ ಗಾಯ.

ನವದೆಹಲಿ : ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಹರಿದು ಆರು ಮಂದಿ ಮೃತಪಟ್ಟಿದ್ದು 10 ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

https://cnewstv.in/?p=11608

ಮಧ್ಯ ಪ್ರದೇಶದ ರತ್ಲಮ್ ಜಿಲ್ಲೆಯಿಂದ ಸುಮಾರು 30 KM ದೂರದ ರತ್ಲಮ್ – ಲೆಬಾದ್ ರಸ್ತೆಯಲ್ಲಿರುವ ಸತ್ರುಂಡಾ ಗ್ರಾಮದ ಬಳಿ ಸುಮಾರು 20 ಮಂದಿ ಬಸ್ಸಿಗಾಗಿ ಕಾಯುತ್ತಾ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ವೇಗವಾಗಿ ಬಂದಂತಹ ಟ್ರಾಕ್ ಜನರ ಗುಂಪಿನ ಮೇಲೆ ಹರಿದಿದೆ ಪರಿಣಾಮವಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎಂಟು ಜನರ ಪರಿಸ್ಥಿತಿ ಚಿಂತಾಜನಕವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಟ್ರಕ್ ಡಿಕ್ಕಿ ಹೊಡೆದಂತಹ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

https://cnewstv.in/?p=11608

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*