Cnewstv / 05.12.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ.
ಭಾರತೀಯ ರೈಲ್ವೆಯು ಪಶ್ಚಿಮ ಕೇಂದ್ರ ರೈಲ್ವೇ (WCR) ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
https://cnewstv.in/?p=11633
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 2521
JBP ವಿಭಾಗ- 884 ಹುದ್ದೆಗಳು
BPL ವಿಭಾಗ- 614 ಹುದ್ದೆಗಳು
ಕೋಟಾ ವಿಭಾಗ- 685
WRS ಕೋಟಾ-160 ಹುದ್ದೆಗಳು
CRWS BPL- 158 ಹುದ್ದೆಗಳು
HQ JBP- 20 ಹುದ್ದೆಗಳು
ಅರ್ಹತಾ ಮಾನದಂಡಗಳು :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆ ಅಥವಾ ಅದರ ಸಮಾನ ಪರೀಕ್ಷೆಯಲ್ಲಿ (10+2 ಪರೀಕ್ಷಾ ವ್ಯವಸ್ಥೆಯ ಅಡಿಯಲ್ಲಿ) ಉತ್ತೀರ್ಣರಾಗಿರಬೇಕು. ಇದರೊಂದಿಗೆ, NCVT/SCVT ನೀಡಿದ ಅಧಿಸೂಚಿತ ವಿಷಯದಲ್ಲಿ ರಾಷ್ಟ್ರೀಯ ಟ್ರೇಡ್ ಪ್ರಮಾಣಪತ್ರ ಹೊಂದಿರಬೇಕು.
https://cnewstv.in/?p=11633
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು.
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ :
10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳು ಅಥವಾ ಅದರ ಸಮಾನ ಪರೀಕ್ಷೆ ಮತ್ತು ITI/ಟ್ರೇಡ್ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗೆ ಹಾಜರಾಗಬೇಕಾಗುತ್ತದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399