ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತ.
Cnewstv / 08.12.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತ.
ಬೆಳಗಾವಿ : ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರ್ನಾಟಕ-ಮಹಾರಾಷ್ಟ್ರ ನಡುವಿನ ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ವಾಹನಗಳ ಮೇಲೆ ದಾಳಿ ನಡೆಯುತ್ತಿರುವುದರಿಂದ ಎರಡೂ ಕಡೆಯಿಂದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಎಲ್ಲ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಮಂಗಳವಾರ ರಾತ್ರಿಯಿಂದಲೇ ಬಹುತೇಕ ಬಸ್‌ಗಳು ಮಹಾರಾಷ್ಟ್ರಕ್ಕೆ ತೆರಳುತ್ತಿಲ್ಲ. ಬೆಳಗಾವಿ ವಿಭಾಗದಿಂದ 69 ಸೇರಿ ಒಟ್ಟು 214 ಬಸ್‌ಗಳು, ಚಿಕ್ಕೋಡಿ ವಿಭಾಗದ ನಿಪ್ಪಾಣಿಯಿಂದ ಕೊಲ್ಲಾಪುರ ಕಡೆಗೆ 160 ಹಾಗೂ ಮಿರಜ್‌ಗೆ ತೆರಳುವ 110 ಬಸ್‌ಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ಕೊಲ್ಲಾಪುರ, ಸಾಂಗಲಿ, ಮಿರಜ್, ಸತಾರಾ, ಪುಣೆ, ಮುಂಬೈ ಸೇರಿದಂತೆ ಯಾವುದೇ ಪಟ್ಟಣಕ್ಕೂ ಬಸ್‌ಗಳು ತೆರಳುತ್ತಿಲ್ಲ. ಅತ್ತ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಎಲ್ಲ ಬಸ್‌ಗಳನ್ನು ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಯ ಕೊಗನೊಳ್ಳಿ ಚೆಕ್‌ಪೋಸ್ಟ್, ಕಾಗವಾಡ ಹಾಗೂ ಬಾಚಿ ಚೆಕ್‌ಪೋಸ್ಟ್‌ಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಕರ್ನಾಟಕ ಪ್ರವೇಶಿಸುವ ಖಾಸಗಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ತಾಲೂಕಿನ ಮರಾಠಿ ಭಾಷಿಕ ಗ್ರಾಮಗಳಲ್ಲಿಯೂ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತ. 2022-12-07