Breaking News

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ.

Cnewstv / 14.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಶಿವಮೊಗ್ಗ : 2022-23 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ಶಂಕರಘಟ್ಟದ ಅಲ್ಪಸಂಖ್ಯಾತರ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಾತಿ ನೀಡಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ದ ಮೂಲಕ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಸೀಟುಗಳ ವಿವರವನ್ನು ವಿದ್ಯಾರ್ಥಿನಿಲಯವಾರು ವಿದ್ಯಾರ್ಥಿನಿಲಯ ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಮುಸ್ಲಿಂ-36, 2ಎ-03, ಎಸ್‍ಸಿ-07, ಎಸ್‍ಟಿ-02 ಸೀಟುಗಳು ಲಭ್ಯವಿದ್ದು ಡಿಸೆಂಬರ್ 27 ಅರ್ಜಿ ಸಲ್ಲಿಸಲು ಕಡೆಯ ದಿನಾಂಕ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಾರ್ಯಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಪವಿಭಾಗ, ಶಿವಮೊಗ್ಗ, 2ನೇ ಮಹಡಿ, ಹಳೇ ಡಿಸಿ ಕಚೇರಿ, ಶಿವಮೊಗ್ಗ ದೂ.ಸಂ: 08182-276258 ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*