Breaking News

ಇಂದಿನಿಂದ ಅಧಿವೇಶನ ಆರಂಭ.

Cnewstv / 19.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ.

ಬೆಳಗಾವಿ ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 19 ರಿಂದ ಡಿಸೆಂಬರ್ 30ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಇದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಎರಡನೇ ಚಳಿಗಾಲದ ಅಧಿವೇಶನವಾಗಿದೆ.

ಬೆಳಿಗ್ಗೆ 11 ಗಂಟೆಗೆ ಉಭಯ ಸದನಗಳ ಕಲಾಪ ಆರಂಭವಾಗಲಿದೆ. ಅದಕ್ಕೂ ಮೊದಲು ಬೆಳಗ್ಗೆ 10:30 ಕ್ಕೆ ಸಾರ್ವರ್ಕರ್ ಭಾವಚಿತ್ರ ಅನಾವರಣ ಸಾಧ್ಯತೆ ಇದೆ.

https://cnewstv.in/?p=11697

ಮುಂಬರಲಿರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಇದು ಮಹತ್ವದ ಸದನವಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿದ್ದು, ವಿಪಕ್ಷಗಳಿಗೆ ತಿರುಗೇಟು ನೀಡಲು ಬಿಜೆಪಿ ನಾಯಕರಿಂದಲೂ ಸಿದ್ಧತೆ ನಡೆಸಿವೆ.

ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಬೆಳಗಾವಿಯಲ್ಲಿ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 6 ಎಸ್ ಪಿ, 11 ಎ ಎಸ್ ಪಿ, 40 ಡಿವೈಎಸ್ಪಿ 106 ಸಿಪಿಐ 275 ಪಿಎಸ್ಐ 234 ಮಹಿಳಾ ಪೊಲೀಸ್ ಸಿಬ್ಬಂದಿ, 16 ಸಿಎಆರ್, 35 ಕೆ ಎಸ್ ಆರ್ ಪಿ, 10 ಯುವತಿ ತೂಕ ಕಡಿಮೆ ಯೋಜನೆ ಮಾಡಲಾಗಿದೆ ಸುವರ್ಣ ಸೌಧ ಸುತ್ತಮುತ್ತ 450ಕ್ಕೂ ಹೆಚ್ಚು ಸಿಸಿ ಕ್ಯಾಮರವನ್ನ ಅಳವಡಿಸಲಾಗಿದೆ.

https://cnewstv.in/?p=11694

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*