Cnewstv / 21.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಖ್ಯಾತ ಗಮಕ ಪದ್ಮಶ್ರೀ ಪುರಸ್ಕ್ರತರಾದ ಗಮಕ ಗಂಧರ್ವ ಹೊಸಹಳ್ಳಿ ಆರ್ ಕೇಶವಮೂರ್ತಿ ಇನ್ನಿಲ್ಲ.
ಶಿವಮೊಗ್ಗ : ಪದ್ಮಶ್ರೀ ಪುರಸ್ಕೃತ ಶ್ರೀಯುತ ಎಚ್ ಆರ್ ಕೇಶವಮೂರ್ತಿಯವರು ಇಂದು ಸಂಜೆ 4 ಗಂಟೆಗೆ ಮೃತಪಟ್ಟಿದ್ದಾರೆ.
ಕಳೆದ ಹಲವು ದಶಕಗಳಿಂದ ನಿರಂತರವಾಗಿ ಗಮಕ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಇವರ ಸಾಧನೆಯನ್ನ ಗುರುತಿಸಿ ಭಾರತ ಸರ್ಕಾರ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

22 ಫೆಬ್ರವರಿ 1934 ರಂದು ಶಿವಮೊಗ್ಗ ಸಮೀಪದ ಹೊಸಹಳ್ಳಿ ಗ್ರಾಮದಲ್ಲಿ ಜನಿಸಿದ ಕೇಶವಮೂರ್ತಿ ಅವರದ್ದು ಕೃಷಿ ಮನೆತನ. ತಂದೆ ರಾಮಸ್ವಾಮಿ ಶಾಸ್ತ್ರಿಗಳು ಸಂಸ್ಕೃತ ವಿದ್ವಾಂಸರು ಹಾಗೂ ಗಾಯಕರು ತಾಯಿ ಲಕ್ಷ್ಮೀದೇವಮ್ಮ.
ಕೇಶವಮೂರ್ತಿ 16ನೇ ವಯಸ್ಸಿನಲ್ಲೇ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಡುವುದನ್ನು ರೂಢಿಸಿಕೊಂಡರು. 100ಕ್ಕೂ ಹೆಚ್ಚು ವಿಭಿನ್ನ ರಾಗಗಳಲ್ಲಿ ವಾಚನ ಮಾಡುವ ಮೂಲಕ ಶತಕರಾಗಿ ಎಂಬ ಬಿರುದಿಗೂ ಪಾತ್ರರಾಗಿದ್ದಾರೆ.
https://cnewstv.in/?p=11715
ರಾಜ್ಯ ಹಾಗೂ ದೇಶದ ಹಲವೆಡೆ ನಡೆದ ಸಂಗೀತ ಕಾರ್ಯಕ್ರಮಗಳಲ್ಲಿ ಗಮಕ ವಾಚನದ ಮೂಲಕ ಗಮನ ಸೆಳೆದಿರುವ ಕೇಶವಮೂರ್ತಿ ಸಾಧನೆಗೆ ಕುಮಾರವ್ಯಾಸ, ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399