ಜನವಿರೋಧಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಮುಂಖಡ ಎಸ್ ಕುಮಾರೇಶ್ ನೇತ್ರತ್ವದಲ್ಲಿ ಬೃಹತ್ ಜಾಥ ಶಿವಮೊಗ್ಗ ನಗರ ರಾಮಣ್ಣ ಶೆಟ್ಟಿ ಪಾರ್ಕ್‌ನಿಂದ ಅಶೋಕ ವೃತ್ತ (ಬಸ್ ಸ್ಯಾಂಡ್ ವೃತ್ತ) ದವರೆಗೆ ನಡೆಸಲಾಯಿತು.
ಜಾಥದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹೆಚ್ .ಎಸ್. ಸುಂದರೇಶ್ , ಮಾಜಿ ಶಾಸಕರಾದ ಕೆಬಿ ಪ್ರಸನ್ನ ಕುಮಾರ್ , ಮಾಜಿ ವಿಧಾನಪರಿಷತ್ ಸದಸ್ಯರಾದ ಆರ್, ಪ್ರಸನ್ನ ಕುಮಾರ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ರೇಖಾರಂಗನಾಥ್, ಕಾಂಗ್ರೆಸ್ ಪಕ್ಷದ ಎಲ್ಲಾ ಪಾಲಿಕೆ ಸದಸ್ಯರು , ಜಿಲ್ಲಾ ಕಾಂಗ್ರೆಸ್ ಹಾಗೂ ಶಿವಮೊಗ್ಗ ನಗರ ಬ್ಲಾಕ್ ಕಾಂಗ್ರೆಸ್ ನ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತ ಉಪಸ್ಥಿತರಿದ್ದರು.