Cnewstv / 26.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿ.ಆರ್.ಡಬ್ಲ್ಯು ಹುದ್ದೆಗೆ ಅರ್ಜಿ ಆಹ್ವಾನ.
ಶಿವಮೊಗ್ಗ : ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹೊಸನಗರ ತಾಲ್ಲೂಕಿನ ಅಂಡಗದೂದೂರು, ನಗರ(ಮೂಡುಗೊಪ್ಪ) ಮತ್ತು ರಾಮಚಂದ್ರಾಪುರ ಗ್ರಾಮ ಪಂಚಾಯ್ತಿಗಳಲ್ಲಿ ವಿ.ಆರ್.ಡಬ್ಲ್ಯು ಹುದ್ದೆಯು ಖಾಲಿ ಇದ್ದು, ಗ್ರಾ.ಪಂ/ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ ೧೮ ರಿಂದ ೪೫ ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
https://cnewstv.in/?p=11741
ನಿಗದಿತ ಅರ್ಜಿ ನಮೂನೆಯನ್ನು ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂಆರ್ ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ರವಿಕುಮಾರ್ ಮೊ.ಸಂ 9731922693 ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ 10 ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು 2023 ರ ಜನವರಿ 11 ರೊಳಗಾಗಿ ಸಲ್ಲಿಸಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399