
Cnewstv / 07.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮತದಾರರ ಅಂತಿಮ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ ಎಷ್ಟು ಮಂದಿ ಅರ್ಹ ಮತದಾರರು ಇದ್ದಾರೆ ಗೊತ್ತಾ ??
ಶಿವಮೊಗ್ಗ : ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ 2023ರ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1 ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11760 ಪುರುಷ ಹಾಗೂ 10419 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1775 ಮತಗಟ್ಟೆಗಳು ಇವೆ ಎಂದು ಅವರು ಹೇಳಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv