
Cnewstv / 07.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ..
ಶಿವಮೊಗ್ಗ : ಈ ಬಾರಿಯ ಮತದಾರರ ಪಟ್ಟಿಯಲ್ಲಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ. ಅದರಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು.
ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1 ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11760 ಪುರುಷ ಹಾಗೂ 10419 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1775 ಮತಗಟ್ಟೆಗಳು ಇವೆ.

ವಿಧಾನಸಭಾ ಕ್ಷೇತ್ರವಾರು ವಿವರ :
ಶಿವಮೊಗ್ಗ ನಗರ :
123770 ಪುರುಷರು,
129204 ಮಹಿಳೆಯರು,
15 ತೃತೀಯ ಲಿಂಗಿ ಸೇರಿದಂತೆ 252989 ಮತದಾರರು ಇದ್ದಾರೆ.
ಶಿವಮೊಗ್ಗ ಗ್ರಾಮಾಂತರ :
103534 ಪುರುಷರು
104525 ಮಹಿಳೆಯರು,
ಮೂವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 208062 ಮತದಾರರು ಇದ್ದಾರೆ.
ಭದ್ರಾವತಿ :
101058 ಪುರುಷರು,
106546 ಮಹಿಳೆಯರು,
ಐವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 207609 ಮತದಾರರು ಇದ್ದಾರೆ.
ತೀರ್ಥಹಳ್ಳಿ
91376 ಪುರುಷರು,
93475 ಮಹಿಳೆಯರು,
ಮೂವರು ತೃತೀಯ ಲಿಂಗಿ ಸೇರಿದಂತೆ 184854 ಮತದಾರರು ಇದ್ದಾರೆ.
ಶಿಕಾರಿಪುರ
98281 ಪುರುಷರು,
97086 ಮಹಿಳೆಯರು,
ನಾಲ್ವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 195371 ಮತದಾರರು ಇದ್ದಾರೆ.
ಸೊರಬ :
97070 ಪುರುಷರು,
95148 ಮಹಿಳೆಯರು,
ಇಬ್ಬರು ತೃತೀಯ ಲಿಂಗಿ ಸೇರಿದಂತೆ ಒಟ್ಟು 192220 ಮತದಾರರು ಇದ್ದಾರೆ.
ಸಾಗರ :
99401 ಪುರುಷರು,
101326 ಮಹಿಳೆಯರು,
ಒಂದು ತೃತೀಯ ಲಿಂಗಿ ಸೇರಿದಂತೆ ಒಟ್ಟು 200728 ಮತದಾರರು ಇದ್ದಾರೆ.
ಲಿಂಗಾನುಪಾತ ಅತಿ ಹೆಚ್ಚು ಭದ್ರಾವತಿ ಕ್ಷೇತ್ರದಲ್ಲಿ 1054 ಇದ್ದು, ಅತಿ ಕಡಿಮೆ ಸೊರಬ ಕ್ಷೇತ್ರದಲ್ಲಿ 980 ಇದೆ ಎಂದರು.
ಕಳೆದ ನವೆಂಬರ್ 9ರಂದು ಪ್ರಕಟಿಸಲಾಗಿದ್ದ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 14,34,138 ಮತದಾರರ ಹೆಸರು ಪ್ರಕಟಿಸಲಾಗಿತ್ತು. ಅಂತಿಮ ಪಟ್ಟಿಯಲ್ಲಿ 40767 ಮತದಾರರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದ್ದು, 33072 ಮತದಾರರ ಹೆಸರು ಕೈ ಬಿಡಲಾಗಿದೆ. 11651 ತಿದ್ದುಪಡಿ ಮಾಡಲಾಗಿದೆ. ತೆಗೆದು ಹಾಕಿರುವುದಕ್ಕೆ 11873 ಮರಣ, 17064 ಸ್ಥಳಾಂತರ, 1058 ಪುನರಾವರ್ತನೆ ಮತ್ತು 3077 ವಲಸೆ ಕಾರಣವಾಗಿದೆ.
ಕರಡು ಪಟ್ಟಿಯಲ್ಲಿ ಲಿಂಗಾನುಪಾತ 1 ಸಾವಿರ ಪುರುಷ ಮತದಾರರಿಗೆ 1014 ಮಹಿಳಾ ಮತದಾರರು ಇದ್ದರು ಎಂದು ಅವರು ಮಾಹಿತಿ ನೀಡಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv