Breaking News

ಬಜರಂಗದಳ ಕಾರ್ಯಕರ್ತ ಸುನಿಲ್ ಹತ್ಯೆ ಯತ್ನ ಪ್ರಕರಣ : ಅರೋಪಿ ಬಂಧನ.

Cnewstv / 10.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಜರಂಗದಳ ಕಾರ್ಯಕರ್ತ ಸುನಿಲ್ ಹತ್ಯೆ ಯತ್ನ ಪ್ರಕರಣ : ಅರೋಪಿ ಬಂಧನ.

ಶಿವಮೊಗ್ಗ : ಸಾಗರದಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಾಗರ ನಗರದ ಬಿಎಚ್ ರಸ್ತೆಯ ಬಸ್ ನಿಲ್ದಾಣದ ಸಮೀಪ ಬಜರಂಗದಳ ಕಾರ್ಯಕರ್ತ ಸುನಿಲ್ ಹತ್ಯೆಗೆ ಯತ್ನ ಮಾಡಲಾಯಿತು. ಆದರೆ ಕೂದಲೇಲೆಯ ಅಂತರದಲ್ಲಿ ಮೆಚ್ಚಿನ ದಾಳಿಯಿಂದ ಸುನಿಲ್ ಪಾರಾಗಿದ್ದರು. ಸಾಗರ ಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೋಪಿಗಳ ಬಂಧನಕ್ಕಾಗಿ ಮೂರು ತಂಡಗಳಾಗಿ ಪೊಲೀಸರು ಶೋಧ ನಡೆಸುತ್ತಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸೂರ್ ಹಾಗೂ ಐಮಾನ್ ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು. A1 ಆರೋಪಿ ಸಮೀರ್ ನನ್ನು ನೆನ್ನೆ ತಡರಾತ್ರಿ ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ.

ದಾಳಿ ಖಂಡಿಸಿ, ಹಿಂದೂ ಪರ ಸಂಘಟನೆಗಳು ಹಾಗೂ ವಿ ಎಚ್ ಪಿ ಸಾಗರ ಬಂದ್ ಗೆ ಕರೆ ನೀಡಿದ್ದು, ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ವಾಹನ ಸಂಚಾರವೂ ಕೂಡ ವಿರಳವಾಗಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*