Breaking News

ಊಟದ ಬಳಿಕ ವಸತಿ ಶಾಲೆಯ ಮಕ್ಕಳು ದಿಢೀರ್ ಅಸ್ವಸ್ಥ

Cnewstv / 16.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಊಟದ ಬಳಿಕ ವಸತಿ ಶಾಲೆಯ ಮಕ್ಕಳು ದಿಢೀರ್ ಅಸ್ವಸ್ಥ

ಶಿವಮೊಗ್ಗ : ನಗರದ ಹೊರವಲಯ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಮಧ್ಯಾಹ್ನ ಊಟದ ಬಳಿಕ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ.

ಇದನ್ನು ಒದಿ : https://cnewstv.in/?p=11877

ಮಧ್ಯಾಹ್ನದ ಊಟದ ಬಳಿಕ ಮಕ್ಕಳಲ್ಲಿ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣವೇನು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇನ್ನು ದೊರೆತಿಲ್ಲ. ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಮಕ್ಕಳ ಆರೋಗ್ಯವನ್ನು ತಪಾಸಣೆ ನಡೆಸುತ್ತಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*