Breaking News

ಬಾಪೂಜಿನಗರ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ. ಆಸ್ಪತ್ರೆಗೆ ದಾಖಲಾದ ಮಕ್ಕಳ ಸಂಖ್ಯೆ 108 ಕ್ಕೆ ಏರಿಕೆ.‌ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ.

Cnewstv / 17.01.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬಾಪೂಜಿನಗರ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ. ಆಸ್ಪತ್ರೆಗೆ ದಾಖಲಾದ ಮಕ್ಕಳ ಸಂಖ್ಯೆ 108 ಕ್ಕೆ ಏರಿಕೆ.‌
ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ.

ಶಿವಮೊಗ್ಗ : ಮೇಲಿನ ಹನಸವಾಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ನೆನ್ನೆ ವಾಂತಿ, ಹೊಟ್ಟೆ ನೋವಿನಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ಬೆನ್ನಲ್ಲೇ ಇಂದು ಬಾಪೂಜಿನಗರದ ಬಾಲಕಿಯರ ಹಾಸ್ಟೆಲ್ ವಿದ್ಯಾರ್ಥಿನಿಯರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅನಾರೋಗ್ಯದ ಈ ಎರಡು ಪ್ರಕರಣಗಳಿಂದ ಒಟ್ಟು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ 108ಕ್ಕೆ ಏರಿಕೆಯಾಗಿದೆ. ಅದರ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು ಯಾವುದೇ ತೊಂದರೆ ಇಲ್ಲ.

ಇದನ್ನು ಒದಿ : https://cnewstv.in/?p=11888

ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜಣ್ಣ ಸಂಕಣ್ಣನವರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದ್ದರು.

ವಿಷ ಅಹಾರ ಸೇವನೆ ಅಥವಾ ಕುಡಿಯುವ ನೀರಿನ ವ್ಯತ್ಯಾಸದಿಂದ ಈ ರೀತಿಯಾಗಿದೆಯೇ ಎಂಬುದರ ಬಗ್ಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.

ಇದನ್ನು ಒದಿ : https://cnewstv.in/?p=11890

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*