Breaking News

ಸಾರಿಗೆ ನೌಕರರ ಮುಷ್ಕರ, ಬಸ್ ಸೇವೆಯಲ್ಲಿ ವ್ಯತ್ಯಯ.

Cnewstv / 23.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಾರಿಗೆ ನೌಕರರ ಮುಷ್ಕರ, ಬಸ್ ಸೇವೆಯಲ್ಲಿ ವ್ಯತ್ಯಯ.

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಸಿಡಿದೆದ್ದಿದ್ದು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ‌. ಈ ಹಿನ್ನೆಲೆಯಲ್ಲಿ ನಾಳೆ ( ಜ.24 ರಂದು )ಕೆಎಸ್ಆರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಮಾಡದ ರಾಜ್ಯ ಸರ್ಕಾರದ ವಿರುದ್ಧ 4 ನಿಗಮದ ಸಾರಿಗೆ ನೌಕರರು ಧರಣಿಗೆ ಮುಂದಾಗಿದ್ದಾರೆ.

4 ನಿಗಮದ ವಿಭಾಗಿಯ ಕಚೇರಿಯ ಮುಂಭಾಗ ಹಾಗೂ ಫ್ರೀಡಂ ಪಾರ್ಕಿನಲ್ಲಿ ಬಿಎಂಟಿಸಿ ನೌಕರರು ಸತ್ಯಾಗ್ರಹ ನಡೆಸುತ್ತಿದ್ದು, ಸಾವಿರಾರು ನೌಕರರು ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ.

ಇದನ್ನು ಒದಿ : https://cnewstv.in/?p=11925

ಕರ್ನಾಟಕ ರಸ್ತೆ ಸಾರಿಗೆ ನೌಕರರ ಫೆಡರೇಶನ್, ಬಿ ಎಂ ಟಿ ಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, KSRTC ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಸೇರಿದಂತೆ ಆರಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆಗೆ ಬೆಂಬಲವನ್ನ ನೀಡಿದೆ. ಹಾಗಾಗಿ ನಾಳೆ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಕಳೆದ 2021 ರ ಏಪ್ರಿಲ್ ನಲ್ಲಿ ನೌಕರರು 15 ದಿನಗಳ ಕಾಲ ಮುಷ್ಕರ ನಡೆಸಿ, ಸರ್ಕಾರಕ್ಕೆ ಮನವಿ ಮಾಡಿದರೂ ಕೂಡ ಏನೋ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ಕಳೆದ ಬಾರಿ ನಡೆದಂತಹ ಪ್ರತಿಭಟನೆಯಲ್ಲಿ ಸರ್ಕಾರಕ್ಕೆ ದೊಡ್ಡ ಹೊಡೆತ ಬಿದ್ದಿತ್ತು ಈ ಬಾರಿ ಮತ್ತೊಮ್ಮೆ ಹಾಗೆ ಆಗುವುದಕ್ಕೂ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*