Breaking News

ವಿಧಾನಸಭಾ ಚುನಾವಣೆ : ಲಿಂಗಾಯತ ಸಮುದಾಯದಿಂದ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ ???

Cnewstv / 2.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವಿಧಾನಸಭಾ ಚುನಾವಣೆ : ಲಿಂಗಾಯತ ಸಮುದಾಯದಿಂದ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ ???

ಶಿವಮೊಗ್ಗ : ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಈಗಾಗಲೇ ಶಿವಮೊಗ್ಗ ನಗರದ ಚುನಾವಣಾ ಅಭ್ಯರ್ಥಿ ಆಕಾಂಕ್ಷಿಯಾಗಿ ಲಿಂಗಾಯತ ಸಮುದಾಯಕ್ಕೆ ಸೇರಿದ ಮೂವರು ಆಕಾಂಕ್ಷೆಗಳು ಅರ್ಜಿ ಸಲ್ಲಿಸಿದ್ದಾರೆ. ಎಸ್ ಪಿ ದಿನೇಶ್, ಹೆಚ್‍ಸಿ ಯೋಗೇಶ್, ವೈ ಎಚ್ ನಾಗರಾಜ್. ಮೂವರು ಕೂಡ ಸಮುದಾಯದಲ್ಲಿ ಹಾಗೂ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.

ಇದನ್ನು ಒದಿ : https://cnewstv.in/?p=11992

ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವಂತಹ ಎಸ್ ಪಿ ದಿನೇಶ್, ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಗುರುತಿಸಿಕೊಂಡಿರುವ ಹೆಚ್ ಸಿ ಯೋಗೇಶ್, ಪಕ್ಷದ ವೈ ಹೆಚ್ ನಾಗರಾಜ್ ರವರ ಹೆಸರು ಕುರಿತು ಹೈಕಮಾಂಡ್ ಚರ್ಚೆ ನಡೆಸಲಾಗುತ್ತಿದೆ.

ಶಿವಮೊಗ್ಗ ನಗರಕ್ಕೆ ಈ ಬಾರಿ ಲಿಂಗಾಯತ ಸಮುದಾಯದ ಯುವ ನಾಯಕರಿಗೆ ಅವಕಾಶವನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮತ್ತೊಂದೆಡೆ ಎಲ್ಲದನ್ನು ಹೊರತುಪಡಿಸಿ ಅರ್ಜಿ ಸಲ್ಲಿಸದ ಮತ್ತೊಬ್ಬ ಅಭ್ಯರ್ಥಿಯನ್ನು ಹೈಕಮಾಂಡ್ ಆಯ್ಕೆ ಮಾಡುವ ಸಂಭವ ಕೂಡ ಹೆಚ್ಚಾಗಿದೆ ಎನ್ಬಲಾಗುತ್ತಿದೆ.

ಇದನ್ನು ಒದಿ : https://fb.watch/ir06dGOxsR/?mibextid=2Rb1fB

ಇಂದು ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ AICC ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ನೇತೃತ್ವದಲ್ಲಿ ಕೆಪಿಸಿಸಿ ಚುನಾವಣಾ ಸಮಿತಿ ಸಭೆ ನಡೆಸಲಾಯಿತು.ಈ ಸಂದರ್ಭದಲ್ಲಿ KPCC ಅಧ್ಯಕ್ಷರಾದ ಡಿಕೆ ಶಿವಕುಮಾರ್ ,CLP ನಾಯಕರಾದ ಸಿದ್ದರಾಮಯ್ಯ , ಅನೇಕ ನಾಯಕರುಗಳು ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಸಾಮರ್ಥ್ಯದ ಬಗ್ಗೆ ಚರ್ಚಿಸಿದ್ದಾರೆ

ಈ ಬಾರಿ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯ ಕಾಂಗ್ರೇಶ್ ಅಭ್ಯರ್ಥಿಯ ಆಯ್ಕೆ ತೀವ್ರ ಕುತೂಹಲವನ್ನು ಮೂಡಿಸುವುದು. ಹೈಕಮಾಂಡ್ ನಿರ್ಧಾರ ಸದ್ಯದಲ್ಲಿಯೇ ಹೊರಬೀಳಲಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*