Breaking News

ಜಗದ ಎಲ್ಲಾ ರೋಗ ರುಜುನಗಳಿಗೆ ಶಿಕ್ಷಣವೇ ಮದ್ದು : ರವಿ ಡಿ ಚನ್ನಣ್ಣನವರ್.

Cnewstv / 3.02.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಜಗದ ಎಲ್ಲಾ ರೋಗ ರುಜುನಗಳಿಗೆ ಶಿಕ್ಷಣವೇ ಮದ್ದು : ರವಿ ಚನ್ನಣ್ಣನವರ್.

ಶಿವಮೊಗ್ಗ : ಜಗದ ಎಲ್ಲಾ ರೋಗ ರುಜುನಗಳಿಗೆ ಶಿಕ್ಷಣವೇ ಮದ್ದು ಎಂದು ಕಿಯೊನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ.ಡಿ.ಚನ್ನಣ್ಣನವರ್ ತಿಳಿಸಿದರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಚಿರಾಗ್ ಇನ್ಫೊಟೆಕ್, ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಿಯೋನಿಕ್ಸ್ ಸಂಸ್ಥೆಯ ಉನ್ನತ ತರಬೇತಿ ಮಾಹಿತಿ‌ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸಮಯ ಮತ್ತು ಅವಕಾಶ ಬದುಕಿನಲ್ಲಿ ಅಮೂಲ್ಯವಾದದ್ದು. ಓದುವ ಸಮಯ, ಸಾಧಿಸುವ ಅವಕಾಶ ಸದಾ ಬದುಕಿನಲ್ಲಿ ಸಿಗುವುದಿಲ್ಲ. ಸಿಗುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಜೀವನದಲ್ಲಿ ಏನೇ ಸಾಧನೆ ಸಾಧ್ಯವಾಗುತ್ತದೆ ಎಂದಾದರೇ ಅದು ನಮ್ಮ ಓದಿನ ಹಪಹಪಿಯಿಂದ ಮಾತ್ರ. ಹಿಂದೆ ಯಾಗಗಳ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಆಶಿಸಲಾಗುತ್ತಿತ್ತು. ಇಂದು ವಿದ್ಯೆಯ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂಬ ಯಾಗ ನಡೆಯುತ್ತಿದೆ.

ಇದನ್ನು ಒದಿ : https://cnewstv.in/?p=11995

ನಮ್ಮೂರಿನ ಹಳ್ಳಿಯ ಶಾಲೆಯಿಂದ ಪದವಿಗೆ ತಲುಪಲು ಸಾಧ್ಯವಾಗಿದ್ದು ಕೆಲವೇ ಕೆಲವರಿಗೆ ಮಾತ್ರ. ವಿದ್ಯಾರ್ಥಿಯಾಗುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಸಾಧಕನಾಗ ಬಯಸುವವರಿಗೆ ಜಗತ್ತನ್ನು ಸಂತೋಷ ಪಡುಸುವ ತೊಂದರೆ ಬೇಡ, ನಿಮ್ಮ ಆತ್ಮತೃಪ್ತಿಗಾಗಿ ಕೆಲಸ ಮಾಡಿ. ಅದಕ್ಕಾಗಿ ವಿವೇಕ ಚೂಡಾಮಣಿಯಂತಹ ಪುಸ್ತಕಗಳ ಅಧ್ಯಯನ ನಡೆಸಿ.

ನಮ್ಮ ಚಂದನವನ ಸದಾಚಾರಗಳ ಚಂದನವನವಾಗಿರಬೇಕು. ಆಂತರಿಕ ಸೌಂದರ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ. ಉತ್ತಮ ವಿದ್ಯಾರ್ಥಿಯ ಪ್ರಮುಖ ಗುಣಲಕ್ಷಣಗಳೆಂದರೇ ಗ್ರಹಿಕೆ, ಕೇಳುವಿಕೆ ಮತ್ತು ಬರೆಯುವಿಕೆ. ಈ ಗುಣಲಕ್ಷಣಗಳೊಂದಿಗೆ ನಿರಂತರ ಕಲಿಕೆ ನಿಮ್ಮದಾಗಲಿ.

ಈ ಜಗತ್ತಿನಲ್ಲಿ ಪೋಲೀಸರಿಗೆ ಇರುವಷ್ಟು ಅವಕಾಶ ಈ ಜಗತ್ತಿನಲ್ಲಿ ಯಾರಿಗೂ ಇಲ್ಲ. ಈ ಜಗತ್ತಿಗೆ ಶಾಂತಿಯ ಅವಶ್ಯಕತೆಯಿದೆ. ಅಂತಹ ಶಾಂತಿ ಮತ್ತು ಸುಭದ್ರತೆ ಕಾಪಾಡುವಲ್ಲಿ ಪೋಲೀಸರ ಪಾತ್ರ ಮಹತ್ವದಾಗಿದೆ ಎಂದು ಹೇಳಿದರು.

ಇದನ್ನು ಒದಿ : https://cnewstv.in/?p=11992

ಎರಡನೇ ಜನ್ಮ ಕೊಟ್ಟ ಶಿವಮೊಗ್ಗ :

ಇಡೀ ಕರ್ನಾಟಕಕ್ಕೆ ರವಿ ಚನ್ನಣ್ಣನವರ್ ಯಾರು ಎಂದು ಪರಿಚಯಿಸಿದ್ದು ಶಿವಮೊಗ್ಗ ಜಿಲ್ಲೆ. ಇಲ್ಲಿ ಕೆಲಸ ಮಾಡಿದ ಪ್ರತಿ ದಿನವೂ ಸಂಭ್ರಮವೇ ಆಗಿತ್ತು. ಶಿವಮೊಗ್ಗ ಜಿಲ್ಲೆ ನನಗೆ ಎರಡನೇ ಜನ್ಮ ಕೊಟ್ಟ ಪುಣ್ಯ ಭೂಮಿ ಎಂದು ಸ್ಮರಿಸಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments