Cnewstv / 08.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬಂಜಾರ ಸಮುದಾಯದ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಿರಂತರ ಅತ್ಯಾಚಾರಗಳು ನಡೆಯುತ್ತಿದ್ದು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು.
ಶಿವಮೊಗ್ಗ: ಬಂಜಾರ ಸಮುದಾಯದ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಿರಂತರ ಅತ್ಯಾಚಾರಗಳು ನಡೆಯುತ್ತಿದ್ದು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಅಖಿಲ ಭಾರತ ಗೋರಸೇನಾದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಕಲ್ಲೇಶ್ ನಾಯ್ಕ ಆಗ್ರಹಿಸಿದರು.
ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಲಿಂಗಸೂರಿನ ಸರ್‌ಎಂ ವಿಶ್ವೇಶ್ವರಯ್ಯ ಪದವಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿಯ ಮೇಲೆ ಕಾಲೇಜಿಗೆ ಸಂಬAಧಿಸಿದ ವಿದ್ಯಾರ್ಥಿನಿಲಯದಲ್ಲಿ ಕಾಲೇಜಿನ ಪ್ರಾಂಶುಪಾಲ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ. ಇದನ್ನು ಗೋರಸೇನಾ ಉಗ್ರವಾಗಿ ಖಂಡಿಸುತ್ತದೆ ಎಂದರು.
ಇದನ್ನು ಒದಿ : https://cnewstv.in/?p=12029
ಇತ್ತೀಚಿನ ವರ್ಷಗಳಲ್ಲಿ ನಮ್ಮ ಸಮುದಾಯದ ಬಾಲಕಿಯರ ಮೇಲೆ ಅತ್ಯಾಚಾರದಂತಹ ಘಟನೆಗಳು ನಡೆಯುತ್ತಲೇ ಇವೆ. ಮಂಡ್ಯದ ಮದ್ದೂರು ತಾಲೂಕಿನಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ತಾಂಡಾದಲ್ಲಿ ಕೂಡ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಈಗ ಲಿಂಗಸೂರಿನ ಸರದಿ. ಇಂತಹ ಕೃತ್ಯಗಳು ನಮ್ಮ ಸಮುದಾಯವನ್ನು ಘಾಸಿಗೊಳಿಸಿದೆ ಎಂದರು.
ಎಲ್ಲಾ ಶಾಲಾಕಾಲೇಜುಗಳು ಮತ್ತು ವಸತಿನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಲೈಂಗಿಕ ಕಿರುಕುಳದಂತಹ ಘಟನೆಗಳ ಬಗ್ಗೆ ವಿಚಾರಣಾ ಸಮಿತಿ ರಚಿಸಬೇಕು. ಮಕ್ಕಳ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದರೆ ಸುಮಾರು 10 ಲಕ್ಷದಷ್ಟು ಪರಿಹಾರ ಧನ ನೀಡಬೇಕು. ಮುಖ್ಯವಾಗಿ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನುಗಳು ಬರಬೇಕು. ಗಲ್ಲುಶಿಕ್ಷೆಯನ್ನೇ ವಿಧಿಸಬೇಕು ಎಂದರು.
ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಗೃಹಮಂತ್ರಿಗಳಿಗೆ ದೂರು ನೀಡಿದ್ದೇವೆ. ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ ಎಂದಿದ್ದಾರೆ. ಅತ್ಯಾಚಾರಿ ಪ್ರಾಚಾರ್ಯನ ಬಂಧನವಾಗಿದೆ. ಯಾವುದೇ ಕಾರಣಕ್ಕೂ ಆತ ಹೊರಗೆ ಬಾರದಂತೆ ಕಠಿಣ ಶಿಕ್ಷೆ ನೀಡಬೇಕು ಮತ್ತು ಗಲ್ಲಿಗೇರಿಸಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv