Breaking News

ವಿಐಎಸ್‌ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.‌

Cnewstv / 08.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವಿಐಎಸ್‌ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.‌

ಶಿವಮೊಗ್ಗ : ವಿಐಎಸ್‌ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಇದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ. ಈ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಅಧಿಕಾರಿಗಳೊಂದಿಗೆ ಮಾತನಾಡಿದೆ. ಮತ್ತು ಇಂದು ಕೂಡ ಕಾರ್ಖಾನೆಯ ಕಾರ್ಮಿಕರು ಮತ್ತು ಅಧಿಕಾರಿಗಳ ನಿಯೋಗವು ತಮ್ಮನ್ನು ಭೇಟಿ ಮಾಡಲಿದೆ. ಅವರೊಂದಿಗೆ ಚರ್ಚಿಸುತ್ತೇನೆ. ಹಾಗೆಯೇ ಕಬ್ಬಿಣ ಮತ್ತು ಉಕ್ಕು ಉತ್ಪಾದಕ ಉದ್ಯಮಿಗಳ ಜೊತೆಯೂ ಸಭೆ ನಡೆಸುತ್ತೇನೆ.

ಇದನ್ನು ಒದಿ : https://cnewstv.in/?p=12041

ಶಿವಮೊಗ್ಗದ ಜನಪ್ರತಿನಿಧಿಗಳ ಜೊತೆಯೂ ಮಾತನಾಡುತ್ತೇನೆ. ಉನ್ನತ ಮಟ್ಟದ ಸಭೆ ಕರೆದು ಅಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಕಾರ್ಖಾನೆಯನ್ನು ಪುನರಾರಂಭಿಸುವಂತೆ ಮನವಿ ಮಾಡುತ್ತೇನೆ. ನಮ್ಮ ಮನವಿಯನ್ನು ಕೇಂದ್ರದ ಸಚಿವರು ಒಪ್ಪುತ್ತಾರೆ. ಈ ವಾರದಲ್ಲಿಯೇ ಈ ಬಗ್ಗೆ ಸಂಪೂರ್ಣ ಕಾರ್ಯೋನ್ಮುಖನಾಗುತ್ತೇನೆ. ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ ಎಂದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*