Breaking News

ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಶಿವಮೊಗ್ಗ ವಿಮಾನ ನಿಲ್ದಾದ ಹೆಸರು ಅನಾವರಣ..

Cnewstv / 08.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಶಿವಮೊಗ್ಗ ವಿಮಾನ ನಿಲ್ದಾದ ಹೆಸರು ಅನಾವರಣ..

ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಮಹತ್ವದ ಘೋಷಣೆಯನ್ನ ಮಾಡಿದ್ದು, ಇದೇ ತಿಂಗಳ 27 ರಂದು ವಿಮಾನ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲಿಯೇ ಹೆಸರು ಘೋಷಣೆ ಮಾಡಲಿದ್ದಾರೆ ಎಂದರು.

ಕೇವಲ 18 ತಿಂಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ವಿಮಾನ ನಿಲ್ದಾಣದಿಂದಾಗಿ ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ, ಆರ್ಥಿಕ, ಪ್ರವಾಸೋದ್ಯಮ ಸೇರಿದಂತೆ ಎಲ್ಲ ವಲಯದಲ್ಲಿ ಜಿಲ್ಲೆಯು ಅಭಿವೃದ್ದಿ ಹೊಂದಲಿದೆ.

ಇದನ್ನು ಒದಿ : https://cnewstv.in/?p=12044

ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*