Cnewstv / 11.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿಧಾನಸಭಾ ಚುನಾವಣೆ : ಆಯೋಗದ ಹಿರಿಯ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ.
ಬೆಂಗಳೂರು : ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಯೋಗದ ಹಿರಿಯ ಅಧಿಕಾರಿಗಳ ಮೂರು ತಂಡ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ರಾಜ್ಯದ ವಿವಿಧ 5ಕ್ಕೂ ಹೆಚ್ಚು ಜಿಲ್ಲೆಗಳಿಗೆ ತಂಡವು ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.
ಫೆಬ್ರುವರಿ 7 ರಂದು ರಾಜ್ಯಕ್ಕೆ ಆಗಮಿಸಿದ ಈ ಮೂವರು ಹಿರಿಯ ಅಧಿಕಾರಿಗಳ ತಂಡಗಳು ಒಂದು ತಂಡ ರಾಜ್ಯದ ಯಾದಗಿರಿ ಮತ್ತು ಕಲಬುರಗಿ, ಮತ್ತೊಂದು ಚಾಮರಾಜನಗರ ಮತ್ತು ಮೈಸೂರು, ಮೂರನೇ ತಂಡ ಸ್ವೀಪ್ ವಿಭಾಗದ ನಿರ್ದೇಶಕರ ನೇತೃತ್ವದಲ್ಲಿ ಬೆಂಗಳೂರು ವಲಯ ಮತ್ತು ಜಿಲ್ಲಾ ನೂಡಲ್ ಅಧಿಕಾರಿಗಳು ವಿಡಿಯೋ ಕಾನ್ಫೆರೆನ್ಸ್ ನಡೆಸಿದರು. ಮೊದಲ ದಿನ ಮತಗಟ್ಟೆಗಳು ಸೇರಿದಂತೆ ವಿವಿಧ ರೀತಿಯ ಮೊದಲ ಕಾರ್ಯಕ್ರಮ ಪೂರ್ವತಯಾರಿ ಕಾರ್ಯಗಳನ್ನು ಖುದ್ದಾಗಿ ವೀಕ್ಷಿಸಿದ ತಂಡಗಳು ಎರಡನೆ ದಿನ ಆಯಾ ವಲಯ ಮಟ್ಟದ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಇದನ್ನು ಒದಿ : https://cnewstv.in/?p=12062
ಭಾರತ ಚುನಾವಣಾ ಆಯೋಗದ ಈ ಮೂರು ತಂಡಗಳು ಈ ಮೂರು ದಿನಗಳ ರಾಜ್ಯ ಬೇಟಿಯಲ್ಲಿ ಪ್ರಮುಖವಾಗಿ ನಡೆಸಿದ ಸಭೆಗಳಲ್ಲಿ ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಅತ್ಯಂತ ಕಡಿಮೆ ಮತದಾನ ನಡೆದಿರುವ ಮತಗಟ್ಟೆಗಳನ್ನು ಗುರುತಿಸುವುದು, ಕಡಿಮೆ ಮತದಾನದ ಕಾರಣಗಳನ್ನು ಕಂಡು ಹಿಡಿದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು, ಮತದಾನದ ಜಾಗೃತಿ ಮೂಲಕ ಮತದಾನಆರೋಗ್ಯ ಹೆಚ್ಚಿಸುವುದು.ಮತಗಟ್ಟೆಗಳನ್ನು ಗುರುತಿಸುವುದು ಮತ್ತು ಅವುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದು, ಅಧಿಕಾರಿ/ಸಿಬ್ಬಂದಿಗಳನ್ನು ನಿರ್ವಹಿಸುವುದು, ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಹೆಚ್ಚಿನ ಯುವಮತದಾರರನ್ನು ಸೆಳೆಯುವುದು ಸೇರಿದಂತೆ ಮತದಾರರ ಪಟ್ಟಿಯ ಕುರಿತು ಹೆಚ್ಚಿನ ಪ್ರಚಾರವನ್ನು ಕೈಗೊಳ್ಳಲು ಚರ್ಚಿಸಲಾಗಿದೆ.
ಭಾರತ ಚುನಾವಣಾ ಆಯೋಗದ ಉಪ ಮುಖ್ಯ ಆಯುಕ್ತರಾದ ಅಜಯ್ ಬಾಡು ಅವರ ನೇತೃತ್ವದ ತಂಡ ಯಾದಗಿರಿ ಜಿಲ್ಲೆಗೆ ಬೇಟಿ ನೀಡಿ ಐವಿಎಂ ಮತ್ತು ವಿವಿಪ್ಯಾಟ್‌ಗಳ ಪ್ರಾಥಮಿಕ ಪರಿಶೀಲನೆ ನಡೆಸಲಾಗಿದೆ. ಮತದಾರರ ಜಾಗೃತಿಗಾಗಿ ಸ್ವೀಪ್ ಮೂಲಕ ಆಯೋಜಿಸಿದ್ದ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಕಲಬುರಗಿ ವಲಯದ ಜಿಲ್ಲಾಧಿಕಾರಿಗಳೊಂದಿಗೆ ಪೂರ್ವ ಚುನಾವಣಾ ತಯಾರಿಗಾಗಿ ಸಭೆ ನಡೆಸಿದರು. ಈ ತಂಡದ ಜೊತೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮತ್ತು ಅಪರ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್ ಅವರು ಭಾಗವಹಿಸಿದ್ದರು.
ಭಾರತ ಚುನಾವಣಾ ಆಯೋಗದ ನಿರ್ದೇಶಕರಾದ ಶ್ರೀಮತಿ ಶುಭ್ರ ಸಕ್ಸೇನಾ ಹಾಗೂ ಕಾರ್ಯದರ್ಶಿ ಬಿ.ಸಿ.ಪಾತ್ರ ಅವರ ನೇತೃತ್ವದ ತಂಡ ಚಾಮರಾಜನಗರ ಜಿಲ್ಲೆಗೆ ಬೇಟಿ ನೀಡಿ ಐವಿಎಂ ಮತ್ತು ವಿವಿಪ್ಯಾಟ್‌ಗಳ ಪ್ರಾಥಮಿಕ ಪರಿಶೀಲನೆ ನಡೆಸಲಾಯಿತು. ಮತದಾರರ ಜಾಗೃತಿಗಾಗಿ ಸ್ವೀಪ್ ಮೂಲಕ ಆಯೋಜಿಸಿದ್ದ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಮೈಸೂರು ವಲಯದ ಜಿಲ್ಲಾಧಿಕಾರಿಗಳೊಂದಿಗೆ ಚುನಾವಣಾ ಪೂರ್ವ ತಯಾರಿಗಾಗಿ ಸಭೆ ನಡೆಸಿದರು. ಈ ತಂಡದ ಜೊತೆಗೆ ರಾಜ್ಯ ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಅವರು ಭಾಗವಹಿಸಿದ್ದರು
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments