Breaking News

ವಿವಿಧ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ, ಅಕ್ಟೋಬರ್ 04 : (ಕರ್ನಾಟಕ ವಾರ್ತೆ) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ತಮ್ಮ ಪ್ರಸ್ತಾವನೆಯನ್ನು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 31ರೊಳಗಾಗಿ www.karepass.cgg.gov.in ಮತ್ತು www.backwardclasses.kar.nic.in ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಇಲಾಖೆಯ ಜಾಲತಾಣವನ್ನು ಅಥವಾ ದೂರವಾಣಿ ಸಂಖ್ಯೆ 8050770005, 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

*