Cnewstv / 16.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹೊಡಿ, ಬಡಿ,ಕಡಿ, ಬಿಜೆಪಿಯ ಸಂಸ್ಕೃತಿ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್
ಶಿವಮೊಗ್ಗ : ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ಪ್ರಚೋದನಕಾರಿಯಾಗಿ ನಾಲಿಗೆ ಹರಿಬಿಟ್ಟ ಎಂದ ಸಚಿವ ಡಾ.ಅಶ್ವಥ್ ನಾರಾಯಣ್ ಅವರ ಹೊಡಿ ಬಡಿ ಸಂಸ್ಕೃತಿಯ ಹೇಳಿಕೆಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಖಂಡಿಸಿ ನಗರದ ಶಿವಪ್ಪ ನಾಯಕ ವೃತದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು
ದುರಹಂಕಾರಿ ಸಚಿವ ಡಾ.ಅಶ್ವಥ್ ನಾರಾಯಣ್ ಕೊಟ್ಟ ಪ್ರಚೋದನಕಾರಿ ಹೇಳಿಕೆಯಿಂದ ಸಿದ್ದರಾಮಯ್ಯನವರಗಾಗಲಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗಾಗಲಿ ಆತಂಕ, ಆಶ್ಚರ್ಯವಾಗಿಲ್ಲ, ಯಾಕೆಂದರೆ ರಾಷ್ಟ್ರಪಿತ ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಬಿಜೆಪಿ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಪ್ರಚೋದನಕಾರಿ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೌನ ಪ್ರತಿಕ್ರಿಯೆ ನೋಡಿದರೆ ಬಿಜೆಪಿಯ ನಿಜ ಸಂಸ್ಕೃತಿ ಏನೆಂಬುದು ಈ ರಾಜ್ಯದ ಜನತೆಗೆ ಅರ್ಥವಾಗುತ್ತಿದೆ.
ಇದನ್ನು ಒದಿ : https://cnewstv.in/?p=12095
ಕೂಡಲೇ ಅಶ್ವತ್ ನಾರಾಯಣ್ ರವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಇವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ. ಇಲ್ಲವಾದಲ್ಲಿ ರಾಜ್ಯದ್ಯಂತ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡುತ್ತದೆ.
ಪ್ರತಿಭಟನೆ ನೇತೃತ್ವವನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್. ಪಿ. ಗಿರೀಶ್ ವಹಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಆರ್ .ಪ್ರಸನ್ ಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ , ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಎನ್ ರಮೇಶ್ , ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷಾ, ಯುವ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷ ಬಿ.ಲೋಕೇಶ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮಾರೇಶ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆರ್ ಕಿರಣ್ , ಪ್ರಮುಖರಾದ ಮಧು ಉಪ್ಪರಕೇರಿ , ತಂಗರಾಜ್ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಎಂ ರಾಕೇಶ್, ಸಂದೀಪ್ ಸುಂದರ್ ರಾಜ್, ಇರ್ಫಾನ್, , ಕೆ ಎಲ್ ಪವನ್, ನದೀಮ್ ಮದರಿ ಪಾಳ್ಯ, ಆದಿಲ್ ಭಾಷಾ, ಮಸ್ತಾನ್ , ಹಯಾದ್, ಆಹಾದ್ ಸೋಮಿನಕೊಪ್ಪ, ಮಧು ಸಿಗೆಹಟ್ಟಿ, ಅಜಿತ್ ,ಪೂರ್ವಿಕ್, ವತನ್ ಲಾಲ್ ಹಾಗೂ ಯುವ ಕಾಂಗ್ರೆಸ್ನ ಕಾರ್ಯಕರ್ತರು ಇದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv