Breaking News

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ಅರಸರ ಅಥವಾ ಜಿಲ್ಲೆಯ ಶರಣರ ಹೆಸರನ್ನು ಇಡಬೇಕು.

Cnewstv / 16.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ಅರಸರ ಅಥವಾ ಜಿಲ್ಲೆಯ ಶರಣರ ಹೆಸರನ್ನು ಇಡಬೇಕು.

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ಅರಸರ ಅಥವಾ ಜಿಲ್ಲೆಯ ಶರಣರ ಹೆಸರನ್ನು ಇಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮನಿ ಸಜ್ಜನ್, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರನ್ನು ಇಡಬೇಕಿತ್ತು. ಆದರೆ, ಅವರು ಅದಕ್ಕೆ ಒಪ್ಪಿಲ್ಲ. ಆದ್ದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು ವರ್ಷಗಳ ಕಾಲ ರಾಜ್ಯಭಾರ ಮಾಡಿದ ಕೆಳದಿ ಅರಸರ ಹೆಸರಿಡಬೇಕು. ಅದರಲ್ಲಿ ಮುಖ್ಯವಾಗಿ ಕೆಳದಿ ಶಿವಪ್ಪನಾಯಕ ಶಿಸ್ತಿಗೆ ಹೆಸರಾದವರು. ಹಲವು ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ಗೋವಾ ಮತ್ತು ಕೇರಳದವರೆಗೂ ಅವರ ರಾಜ್ಯ ವಿಸ್ತಾರವಾಗಿತ್ತು. ಕಂದಾಯ ವ್ಯವಸ್ಥೆಯನ್ನು ಒಂದು ಶಿಸ್ತಿಗೆ ಒಳಪಡಿಸಿದ ಕೀರ್ತಿ ಅವರದ್ದು. ಆದ್ದರಿಂದ ಅವರ ಹೆಸರನ್ನೇ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದರು.

ಇದನ್ನು ಒದಿ : https://cnewstv.in/?p=12107

ಆಕಸ್ಮಾತ್ ಶಿವಪ್ಪನಾಯಕ ಹೆಸರಿಡಲು ಆಗದಿದ್ದರೆ ಕೆಳದಿ ಚೆನ್ನಮ್ಮ ಅವರ ಹೆಸರನ್ನಾದರೂ ಇಡಬೇಕು. ದೇಶದಲ್ಲಿರುವ ವಿಮಾನ ನಿಲ್ದಾಣಕ್ಕೆ ಇಂದಿರಾಗಾಂಧಿ ಅವರ ಹೆಸರನ್ನು ಬಿಟ್ಟರೆ ಯಾವ ಮಹಿಳೆಯ ಹೆಸರನ್ನೂ ವಿಮಾನ ನಿಲ್ದಾಣಕ್ಕೆ ಇಟ್ಟಿಲ್ಲ. ಆದ್ದರಿಂದ ಜಿಲ್ಲೆಯಲ್ಲಿ ಸುಮಾರು 25 ವರ್ಷಗಳ ಕಾಲ ಆಡಳಿತ ನಡೆಸಿ ಮರಾಠ ಸಾಮ್ರಾಜ್ಯವನ್ನು ಉಳಿಸಿದ ಕೀರ್ತಿಗೂ ಪಾತ್ರರಾಗಿರುವ ಕೆಳದಿ ಚೆನ್ನಮ್ಮನ ಹೆಸರನ್ನಾದರೂ ಇಡಬೇಕು ಎಂದರು.

ಕೆಳದಿ ಅರಸರ ಹೆಸರನ್ನು ಬಿಟ್ಟರೆ ಇನ್ನುಳಿದಂತೆ ಶಿವಮೊಗ್ಗ ಶರಣರ ನಾಡಾಗಿದೆ. ಅಕ್ಕಮಹಾದೇವಿ, ಅಲ್ಲಮಪ್ರಭು ಶರಣರ ಪಟ್ಟಿಯಲ್ಲಿ ಆದ್ಯತೆಯ ಸ್ಥಾನ ಪಡೆದಿದ್ದಾರೆ. ಹಾಗಾಗಿ ಅಲ್ಲಮಪ್ರಭು ಅಥವಾ ಅಕ್ಕಮಹಾದೇವಿ ಅವರ ಹೆಸರನ್ನಾದರೂ ಇಡಬೇಕು ಎಂದರು. ಕೆಳದಿ ಶಿವಪ್ಪನಾಯಕ ಅಥವಾ ಕೆಳದಿ ಚೆನ್ನಮ್ಮ ಹೆಸರಿಡುವಂತೆ ಈಗಾಗಲೇ ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಹೇಶಮೂರ್ತಿ ಸಿ., ಆನಂದಮೂರ್ತಿ, ಪಾಲಾಕ್ಷಪ್ಪ ಇದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

 

Leave a Reply

Your email address will not be published. Required fields are marked *

*