Cnewstv / 20.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ: ಪರೋಕ್ಷವಾಗಿ ಸಿದ್ದರಾಮಯ್ಯರನ್ನು ಹೆಣಕ್ಕೆ ಹೋಲಿಸಿದ ಸಿ.ಟಿ.ರವಿ.
ಉಡುಪಿ : ಕೇಸರಿ ಕಂಡರೆ ಆಗದ ಮಾಜಿ ಸಿಎಂ, ನಾನು ಹಿಂದೂ ಅಂತಾರೆ. ಆದರೆ ಹಿಂದುತ್ವವಾದಿಯಲ್ಲ ಎಂದು ಹೇಳುತ್ತಾರೆ. ಹಿಂದೂ ಅಂದ್ರೆ ದೇಹ, ಹಿಂದುತ್ವ ಅನ್ನೋದು ಜೀವ. ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ ಎಂದು ಮಾಜಿ ಸಿಎಂ ಸಿದ್ಧರಾಮಯ್ಯರನ್ನು ಪರೋಕ್ಷವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೆಣಕ್ಕೆ ಹೋಲಿಸಿದ್ದಾರೆ.
ಇದನ್ನು ಒದಿ : https://cnewstv.in/?p=12145
ಉಡುಪಿ ಜಿಲ್ಲೆಯ ಎಂಜಿಎಂ ಮೈದಾನದಲ್ಲಿ ಜಿಲ್ಲಾ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಜೀವ ಇಲ್ಲದ ಕಾಂಗ್ರೆಸ್ ಪಕ್ಷವನ್ನು ಬಹಳ ಹೊತ್ತು ಇಟ್ಟುಕೊಳ್ಳಬಾರದು. ಹಾಗಾಗಿ ವಿಧಿವಿಧಾನ ಮಾಡಿ ಸ್ಮಶಾನಕ್ಕೆ ಕಳುಹಿಸಬೇಕು. ಅಂದರೆ ಕಾಂಗ್ರೆಸ್ ರಾಜಕೀಯವಾಗಿ ಸ್ಮಶಾನಕ್ಕೆ ಕಳುಹಿಸಬೇಕು. ಹೂಳುವವರು ಹೂಳಲಿ, ಸುಡೋರು ಸುಡಲಿ, ಹೂ ಹಾಕಿ ಸ್ಮಶಾನಕ್ಕೆ ಕಳುಹಿಸಿ. ಪಿಂಡ ಹಾಕುವ ಜವಾಬ್ದಾರಿ ಇಲ್ಲ, ಆ ದಂಡ ಪಿಂಡಗಳು ಇದ್ದಾಗಲೇ ಸರಿಯಾಗಿ ತಿಂದಿದ್ದಾರೆ ಎಂದು ತೀರ್ವ ವಾಗ್ದಾಳಿ ಮಾಡಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv