Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ವಿಮಾನ ಹಾರಾಟ..!!!
ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ಪರೀಕ್ಷಾರ್ಥವಾಗಿ ವಿಮಾನ ಹಾರಾಟ ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆಗೆ ಫೆ27ರ ಬೆಳಿಗೆ 11ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಡಳಿತ ಮತ್ತು ಪಕ್ಷದ ವತಿಯಿಂದ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದರು.
ಇದನ್ನು ಒದಿ : https://cnewstv.in/?p=12157
ಪ್ರಧಾನ ಮಂತ್ರಿಯವರ ಮೊದಲ ಲ್ಯಾಂಡಿಂಗ್ ಇದು. ಈಗಾಗಲೇ ಇಂದಿನಿಂದ ಪರೀಕ್ಷಾರ್ಥವಾಗಿ ವಿಮಾನ ಹಾರಾಟ ನಡೆಯಲಿದೆ. ಮತ್ತು ವಿಮಾನ ಹಾರಾಟಕ್ಕೆ ಅಧಿಕೃತ ಲೈಸೆನ್ಸ್ ಕೂಡ ಸಿಕ್ಕಿದೆ. ಕೆ.ಎಸ್‌ಐಡಿಸಿ ಇದರ ಜವಾಬ್ದಾರಿ ಹೊತ್ತಿದೆ. ವಿಮಾನ ಪ್ರಾಧಿಕಾರ ತಾಂತ್ರಿಕ ವಿಷಯಗಳನ್ನು ನೋಡಿಕೊಂಡರೆ, ರಾಜ್ಯ ಸರ್ಕಾರ ನಿರ್ವಹಣೆಯನ್ನು ಹೊತ್ತುಕೊಂಡಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಹಾಗೂ ವಿಮಾನ ನಿಲ್ದಾಣ ಸ್ಥಾಪನೆಗೆ ಶ್ರಮವಹಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಎಂದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399