Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ.
ಶಿವಮೊಗ್ಗ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಫೆಬ್ರವರಿ-2023ರ 23 ಮತ್ತು 24 ರಂದು ಕೋಳಿ ಸಾಕಾಣಿಕಾ ತರಬೇತಿಯನ್ನು ಆಯೋಜಿಸಿದ್ದು, ತರಬೇತಿಯಲ್ಲಿ ಭಾಗವಹಿಸಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು.
ಹೆಚ್ಚಿನ ವಿವರಕ್ಕಾಗಿ ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ದೂ. ಸಂ.: 08192-233787 ನ್ನು ಸಂಪರ್ಕಿಸುವಂತೆ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು, ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments