Breaking News

ಕೆ.ಎಸ್. ಈಶ್ವರಪ್ಪ ಒಬ್ಬ ಮಹಿಷಾಸುರ : ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ.

Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೆ.ಎಸ್. ಈಶ್ವರಪ್ಪ ಒಬ್ಬ ಮಹಿಷಾಸುರ : ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ.

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಒಬ್ಬ ಮಹಿಷಾಸುರ ಎಂದು ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಕಟುವಾಗಿ ಟೀಕಿಸಿದರು.

https://fb.watch/iVH3Dwp5J2/?mibextid=RUbZ1f

ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿ.ಎಸ್. ಯಡಿಯೂರಪ್ಪ ಅಭಿವೃದ್ಧಿಯ ಹರಿಕಾರ ಎಂಬುದರಲ್ಲಿ ಎರಡು ಮಾತಿಲ್ಲ. ಒಬ್ಬ ಉತ್ತಮ ಆಡಳಿತಗಾರ. ರಾಜಕಾರಣಕ್ಕೆ ಬಂದಾಗ ಪರಸ್ಪರ ಟೀಕೆಗಳು ಅನಿವಾರ್ಯವಾಗಿರುತ್ತವೆ. ಅದನ್ನು ಹೊರತುಪಡಿಸಿದರೆ ಯಡಿಯೂರಪ್ಪನವರ ಬಗ್ಗೆ ನನಗೆ ಪ್ರೀತಿ ಇದೆ. ಅದರೆ ಬಿಜೆಪಿಯವರು ಇದೇ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸಿ ಕಣ್ಣೀರು ತರಿಸಿದ್ದಕ್ಕೆ ನೋವು ಇದೆ ಎಂದರು.

ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಕತ್ತಿ ಮಸೆಯುವ ಬಿಜೆಪಿಯ ತಂಡವೇ ಇದೆ. ಸಿ.ಟಿ. ರವಿ, ಸಂತೋಷ್ ಸೇರಿದಂತೆ ಹಲವರಿದ್ದಾರೆ. ಇದರಲ್ಲಿ ಕೆ.ಎಸ್. ಈಶ್ವರಪ್ಪ ಕೂಡ ಒಬ್ಬರು. ಇವರು ಅಮಿತ್ ಶಾ ಅವರನ್ನು ಮೆಚ್ಚಿಸಲು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಹೋಲಿಸುತ್ತಾರೆ. ಎಲ್ಲಿ ಹೋಲಿಕೆ ಇದೆ, ಈ ಈಶ್ವರಪ್ಪ ಒಬ್ಬ ಮಹಿಷಾಸುರ ಇದ್ದಂತೆ. ಇಂತಹ ಹೇಳಿಕೆ ನೀಡಿರುವುದು ನಾಚಿಕೆಗೇಡಿತನ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಡಾ. ಶ್ರೀನಿವಾಸ ಕರಿಯಣ್ಣ, ಶಂಕರಘಟ್ಟ ರಮೇಶ್, ವೈ.ಹೆಚ್. ನಾಗರಾಜ್, ಜಿ.ಡಿ.ಮಂಜುನಾಥ್, ಬಾಲಾಜಿ, ಮಹೇಂದ್ರ ಸೇರಿದಂತೆ ಹಲವರಿದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*