Breaking News

ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ : ಟಿ.ಡಿ. ಮೇಘರಾಜ್.

Cnewstv / 01.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ : ಟಿ.ಡಿ. ಮೇಘರಾಜ್.

ಶಿವಮೊಗ್ಗ: ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ. ಇದರ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆಗಳು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದ್ದಾರೆ.
ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದ ಜನರ ಬಹುದಿನದ ಕನಸು ನನಸಾಗಿದೆ. ಪ್ರಧಾನ ಮಂತ್ರಿಗಳೇ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಬಂದಿದ್ದರಿಂದ ಕೆಲವು ನ್ಯೂನತೆಗಳು ಆಗಿವೆ ಅದಕ್ಕಾಗಿ ವಿಷಾದಿಸುತ್ತೇವೆ ಎಂದರು.

ಉದ್ಘಾಟನಾ ಕಾರ್ಯಕ್ರಮಕ್ಕೆ ಸುಮಾರು 2ಲಕ್ಷ ಜನರು ಬರಬಹುದೆಂಬ ಅಂದಾಜು ಮಾಡಲಾಗಿತ್ತು. 2 ಲಕ್ಷ ಜನರಿಗೆ ಊಟ ತಿಂಡಿ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಆದರೆ 3ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರಿಂದ ಒಂದು ರೀತಿಯಲ್ಲಿ ಕ್ರೌಡ್ ಬಸ್ರ್ಟ್ ಆದಂತೆ ಆಗಿದೆ. ಕೆಲವರಿಗೆ ಕುಡಿಯಲು ನೀರು ಸಿಕ್ಕಿಲ್ಲ. ವiತ್ತೆ ಕೆಲವರಿಗೆ ಊಟ ವಿಳಬವಾಗಿದೆ. ಕೆಲವು ನ್ಯೂನತೆಗಳನ್ನು ಹೊರತುಪಡಿಸಿದರೆ ಕಾರ್ಯಕ್ರಮವಂತೂ ಯಶಸ್ವಿಯಾಗಿದೆ. ಭದ್ರತಾ ದೃಷ್ಟಿಯಿಂದ ನೀರಿನ ಬಾಟಲ್ ಅನ್ನು ಒಳಗಡೆ ಬಿಟ್ಟಿಲ್ಲವಾದ್ದರಿಂದ ಸಮಸ್ಯೆ ತುಸು ಹೆಚ್ಚಾಗಿದೆ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ ಎಂದರು.

ಬಿಜೆಪಿಯ ಕಾರ್ಯಕರ್ತ ಮಲ್ಲಿಕಾರ್ಜುನ್ ಅವರು ಉದ್ಘಾಟನಾ ಕಾರ್ಯಕ್ರಮಕ್ಕೆ ಹೋದಾಗ ಮೃತಪಟ್ಟಿರುವುದು ನೋವಿನ ಸಂಗತಿಯಾಗಿದೆ. ಅವರ ಮಕ್ಕಳಿಬ್ಬರು 10 ಮತ್ತು 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಪಕ್ಷ ತೀರ್ಮಾನಕೈಗೊಳ್ಳಲಿದೆ. ಮತ್ತು ಪಕ್ಷದ ಚೌಕಟ್ಟಿನಲ್ಲಿ ಏನೆಲ್ಲಾ ಸಹಾಯ ಮಾಡಬಹುದು ಎಂಬುದನ್ನು ಕೂಡ ಯೋಚಿಸಲಾಗುವುದು ಎಂದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*