Cnewstv / 02.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬಿಜೆಪಿ ಯಾವಾಗಲೂ ಹಿಂಬಾಗಿಲಿನಿಂದಲೇ ಅಧಿಕಾರ ಪಡೆದಿದೆ – ಮಧು ಬಂಗಾರಪ್ಪ .
ಶಿವಮೊಗ್ಗ : ಬಿಜೆಪಿ ಯಾವಾಗಲೂ ಹಿಂಬಾಗಿಲಿನಿಂದಲೇ ಅಧಿಕಾರ ಪಡೆದಿದೆ ಆದರೆ ಈ ಬಾರಿಹಾಗೆ ಆಗುವುದಿಲ್ಲ. ನಾವು ಈಗ ಎಷ್ಟು ಸಂಖ್ಯೆಯಲ್ಲಿ ಗೆಲ್ಲುತ್ತೇವೆ ಎಂದು ಹೇಳುವುದಿಲ್ಲ. ಏಕೆಂದರೆ ಅದು ಅವರಿಗೆ ಗೊತ್ತಾದರೆ ಈಗಿನಿಂದಲೇ ಶಾಸಕರ ಖರೀದಿಯಲ್ಲಿ ತೊಡಗುತ್ತಾರೆ. ಆದರೆ ಈ ಬಾರಿ ಶಾಸಕರನ್ನು ಕೊಂಡುಕೊಳ್ಳದಿರುವಷ್ಟು ಬಹುಮತವನ್ನು ಕಾಂಗ್ರೆಸ್ ಪಡೆಯುತ್ತದೆ ಎಂದು ಎಐಸಿಸಿ ಸದಸ್ಯ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
ಅವರು ಇಂದು ಕಲ್ಲಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ನಂತರ ಮಾಧ್ಯಮದೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರದಲ್ಲ ಬಡವರ ಬದುಕು ದುಸ್ತರವಾಗಿದೆ. ಆಡಳಿತ ವೈಫಲ್ಯ ಕಂಡಿದೆ. ಸೊರಬದಲ್ಲೂ ಇದೇ ಪರಿಸ್ಥಿತಿ ಇದೆ. ರಾಜ್ಯದಲ್ಲಿ ಆಡಳಿತ ಸತ್ತುಹೋಗಿದ್ದರೆ, ಸೊರಬಾದಲ್ಲಿ ಅದನ್ನು ಈಗಾಗಲೇ ಸಮಾದಿ ಮಾಡಲಾಗಿದೆ. ಈ ಬಾರಿ ಸೊರಬಾದ ಜನರು ನನ್ನನ್ನು ಅತಿಹೆಚ್ಚು ಬಹುಮತದಿಂದ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ.
ಈ ಸಂದರ್ಭದಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಮಧು ಬಂಗಾರಪ್ಪ ಅವರಿಗೆ ಹೂಗುಚ್ಚ ಹಾಗೂ ಶಾಲು ಹೊದಿಸುವುದರ ಮೂಲಕ ಹುಟುಹಬ್ಬಕ್ಕೆ ಶುಭ ಕೋರಿದರು. ಕಾಂಗ್ರೆಸ್ ಮುಖಂಡರುಗಳಾದ ಆರ್. ಪ್ರಸನ್ನಕುಮಾರ್, ಕೆ.ಬಿ. ಪ್ರಸನ್ನಕುಮಾರ್, ಎನ್.ರಮೇಶ್, ಜಿ.ಡಿ.ಮಂಜುನಾಥ್, ರಮೇಶ್ ಶಂಕರಘಟ್ಟ, ಬಲದೇವಕೃಷ್ಣ, ದೀಪಕ್ ಸಿಂಗ್, ಖಲೀಂ, ವೈ.ಹೆಚ್. ನಾಗರಾಜ್, ಶ್ರೀನಿವಾಸ ಕರಿಯಣ್ಣ, ಪಿ.ಓ. ಶಿವಕುಮಾರ್, ವೇದಾ ವಿಜಕುಮಾರ್, ಕಲಗೋಡು ರತ್ನಾಕರ್ ಸೇರಿದಂತೆ ಹಲವರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv