Cnewstv / 02.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್.
ಶಿವಮೊಗ್ಗ : 2022-23 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿ ಮಾಡಲು ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ ಮಾ.05 ರ ಭಾನುವಾರದಂದು ನಗರದ ಸಹ್ಯಾದ್ರಿ ಕಾಲೇಜ್ ಎದುರು ವಿದ್ಯಾನಗರ, ಶಾಂತಿನಗರದ ಯಲ್ಲಮ್ಮ ದೇವಸ್ಥಾನ ಚಾನಲ್ ಹತ್ತಿರ, ಮಲ್ಲಿಕಾರ್ಜುನ ನಗರ ಗಣಪತಿ ದೇವಸ್ಥಾನದ ಎದುರು 100 ಅಡಿರಸ್ತೆ, ಜಿಲ್ಲಾ ಪಂಚಾಯತ್ ಕಚೇರಿ ಹಿಂಭಾಗ ಎ.ಎನ್.ಕೆ.ರಸ್ತೆ, ಹಾಗೂ ಅಶೋಕನಗರ ನಂದಿನಿ ಬೂತ್ ಪೊಲೀಸ್ ಠಾಣೆ ಹತ್ತಿರ, ಶಿವಮೊಗ್ಗ ಈ ಸ್ಥಳಗಳಲ್ಲಿ ವಿಶೇಷ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗುವುದು.
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿ
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv