Cnewstv / 05.03.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿಮಾನದ ಶೌಚಾಲಯದಲ್ಲಿ ಸಿಕ್ತು ಎರಡು ಕೋಟಿ ಮೌಲ್ಯದ ಚಿನ್ನದ ಗಟ್ಟಿ.
ನವದೆಹಲಿ : ವಿಮಾನದ ಶೌಚಾಲಯದಲ್ಲಿ ಎರಡು ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳು ದೊರೆದಂತಹ ಘಟನೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ವಿದೇಶದಿಂದ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಕಳ್ಳರು ನಾನಾ ರೀತಿಯ ಮಾರ್ಗಗಳನ್ನು ಅನುಸರಿಸುತ್ತಿದ್ದರು. ಇಷ್ಟು ದಿನ ಉಡುಪುಗಳು, ಸೂಟ್ಕೇಸ್, ಬ್ಯಾಗ್, ಬೆಲ್ಟ್ ಗಳಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಿಸುತ್ತಿದ್ದರು. ಆದರೆ ಇದೀಗ ವಿಮಾನದ ಶೌಚಾಲಯದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುವ ಹೊಸ ಮಾರ್ಗವನ್ನು ಅನುಸರಿಸಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕಸ್ಟಮ್ ಅಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ವಿಮಾನದ ಶೌಚಾಲಯದ ಸಿಂಕ್ ನಲ್ಲಿ ತ್ಯಾಜ್ಯರೂಪದಲ್ಲಿ ಅಡಗಿಸಿದ 4 ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯವು ಸುಮಾರು ಎರಡು ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಘಟನೆಯ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv