Breaking News

ರಾಜ್ಯಮಟ್ಟದ ಅಥ್ಲೇಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಸಾಧನೆ..

Cnewstv / 07.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಜ್ಯಮಟ್ಟದ ಅಥ್ಲೇಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಸಾಧನೆ..

ಶಿವಮೊಗ್ಗ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಫೆ. 20 ರಿಂದ 22ರವರೆಗೆ ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಅಥ್ಲೇಟಿಕ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾಶಾಲೆಯ ವಿದ್ಯಾರ್ಥಿನೀಯರು ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿರುತ್ತಾರೆ.

ಗೌತಮಿ ಗೌಡ ಎತ್ತರ ಜಿಗಿತದಲ್ಲಿ 1.58 ಸೆ.ಮೀ. ಎತ್ತರ ಜಿಗಿದು ತಮ್ಮ 6 ವರ್ಷ ಹಿಂದಿನ ದಾಖಲೆಯನ್ನು ಮುರಿದು ಪ್ರಥಮ ಸ್ಥಾನ ಗಳಿಸಿದ್ದಾರೆ ಹಾಗೂ ತ್ರಿವಿಧ ಜಿಗಿತದಲ್ಲಿ ತೃತೀಯ ಸ್ಥಾನವನ್ನು, ಗೌರಾಂಗಿ ಗೌಡ 100 ಮೀ ಹರ್ಡಲ್ಸ್‍ನಲ್ಲಿ ಪ್ರಥಮ ಮತ್ತು ಲಕ್ಷ್ಮೀ ಹೆಚ್.ಪಿ. 400 ಮೀ ಹಾಗೂ 600 ಮೀ ಓಟದಲ್ಲಿ ತೃತೀಯ ಸ್ಥಾನಗಳಿಸಿ ಜಿಲ್ಲೆಗೆ ಗೌರವ ತಂದುಕೊಟ್ಟಿದ್ದಾರೆ. ಕ್ರೀಡಾಪಟುಗಳು ಅಥ್ಲೇಟಿಕ್ ತರಬೇತುದಾರ ಬಾಳಪ್ಪ ಮಾನೆಯವರಲ್ಲಿ ತರಬೇತು ಪಡೆದಿರುತ್ತಾರೆ. ಈ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ. ಹಾಗೂ ಸಿಬ್ಬಂದಿವರ್ಗದವರು ಶುಭ ಹಾರೈಸಿದ್ದಾರೆ..‌

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*