Cnewstv / 08.03.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭ.
ಬೆಂಗಳೂರು : 2022-23ರ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರತಿವರ್ಷದಂತೆ ಈ ಬಾರಿಯೂ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ.
ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ. ಈ ವರ್ಷ ರಾಜ್ಯಾದ್ಯಂತ 5,716 ಕಾಲೇಜುಗಳಿಂದ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1,109 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲು ಸಿಸಿ ಕ್ಯಾಮೆರವನ್ನು ಅಳವಡಿಸಲಾಗಿದೆ. ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಾಣಿಕೆ, ಸಂಗ್ರಹ ಮತ್ತು ಮೌಲ್ಯಮಾಪನದ ಕೇಂದ್ರಗಳಲ್ಲಿ 24/7 ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.
ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡಲಾಗುವುದು. ಸೈಬರ್ ಸೆಂಟರ್, ಗೇಮ್ ಸೆಂಟರ್, ಟ್ಯೂಷನ್ ಗಳ ಮೇಲೆ ವಿಶೇಷ ನಿಗಾ ಇಡಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments