Cnewstv / 16.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಾಳೆ ಜಿಲ್ಲೆಯಲ್ಲಿ ಸಾರಿಗೆ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ.
ಶಿವಮೊಗ್ಗ : ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯ ಸಮಾರಂಭದಲ್ಲಿ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಮತ್ತು ನೂತನ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 125 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.
ಆದ್ದರಿಂದ ನಾಳೆ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿರುತ್ತಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments