Breaking News

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಜಿಲ್ಲೆಗೆ ಭೇಟಿ.. ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ???

Cnewstv / 16.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಜಿಲ್ಲೆಗೆ ಭೇಟಿ.. ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ???

ಶಿವಮೊಗ್ಗ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮಾ.17 ರಂದು ಶಿವಮೊಗ್ಗ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಿಗ್ಗೆ 11.30 ರಿಂದ ಮಧ್ಯಾಹ್ನದವರೆಗೆ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ

ಬೆಳಗ್ಗೆ 11.20 ಕ್ಕೆ ಶಿಕಾರಿಪುರ ಹೆಲಿಪ್ಯಾಡ್ ತಲುಪುವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಸ್ಪತ್ರೆಯ ಉದ್ಘಾಟನೆ ಹಾಗೂ ನೂತನ ಸರ್ಕಾರಿ ಬಸ್ ನಿಲ್ದಾಣದ ಉದ್ಘಾಟನೆ ಮಾಡುವರು. ಮಧ್ಯಾಹ್ನ 12.00 ಕ್ಕೆ ಶಿಕಾರಿಪುರದ ಸರ್ಕಾರಿ ಡಿಪೋ ಉದ್ಘಾಟಿಸುವರು. 12.30ಕ್ಕೆ ರಸ್ತೆಯ ಮೂಲಕ ಉಡುತಡಿ – ಉಡುಗಣಿಗೆ ತೆರಳಿ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ ಮಾಡುವರು ಹಾಗೂ ಅಕ್ಷರಧಾಮ ಮಾದರಿಯ ಯಾತ್ರಾ ಸ್ಥಳವನ್ನು ಉದ್ಘಾಟಿಸುವರು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ಶಂಕುಸ್ಥಾಪನೆ ಮಾಡುವರು.

ಮಧ್ಯಾಹ್ನ 2.15 ಕ್ಕೆ ಶಿಕಾರಿಪುರ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು, ಹೆಚ್. ಕಡದಕಟ್ಟೆಗೆ ತಲುಪುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿರುತ್ತಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*