Breaking News

ಕಾಂಗ್ರೆಸ್ ಚುನಾವಣಾ ಸಮಿತಿಯ ಮಹತ್ವದ ಸಭೆ. ಅಭ್ಯರ್ಥಿಗಳ ಪಟ್ಟಿ ಅಂತಿಮ.

Cnewstv / 19.03.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕಾಂಗ್ರೆಸ್ ಚುನಾವಣಾ ಸಮಿತಿಯ ಮಹತ್ವದ ಸಭೆ. ಅಭ್ಯರ್ಥಿಗಳ ಪಟ್ಟಿ ಅಂತಿಮ.

ನವದೆಹಲಿ : ಇಂದು ಎಐಸಿಸಿ ಮುಖ್ಯ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ವರಿಷ್ಠರ ಮಹತ್ವವಾದ ಸಭೆ ನಡೆದಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 120 ರಿಂದ 125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಹಾಲಿ ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳಲ್ಲಿ ಆ ಶಾಸಕರಿಗೆ ಟಿಕೆಟ್ ಖಚಿತ ಎಂದು ಹೇಳಲಾಗುತ್ತಿದ್ದು, ಕೆಲವು ಕಡೆ ಮಾತ್ರ ಬದಲಾವಣೆಯಾಗುವ ಸಾಧ್ಯತೆ ಇದೆ.

ಸುಮಾರು 3 ಗಂಟೆಗೂ ಅಧಿಕ ಕಾಲ ಸುದೀರ್ಘ ಸಭೆ ನಡೆದಿದ್ದು, ಯಾವ ಯಾವ ಅಭ್ಯರ್ಥಿಗಳು ಬಿ ಫಾಮ್ ಪಡೆದಿದ್ದಾರೆ ಎಂಬುದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ.

ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದೆ ಎಂದು ಡಿಕೆ ಶಿವಕುಮಾರ್ ಅವರು, ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವಿಟ್ ಮಾಡಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ನವ ದೆಹಲಿಯ ಎಐಸಿಸಿ ಮುಖ್ಯ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಶ್ರೀ ‌ರಾಹುಲ್ ಗಾಂಧಿ ಮೊದಲಾದವರೊಂದಿಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಯಿತು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*