Breaking News

ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲುಗಳನ್ನು ಗೋಮೂತ್ರದಿಂದ ಶುದ್ಧಗೊಳಿಸಿದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು..

Cnewstv / 20.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲುಗಳನ್ನು ಗೋಮೂತ್ರದಿಂದ ಶುದ್ಧಗೊಳಿಸಿದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು..

ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲುಗಳನ್ನು ಗೋಮೂತ್ರದಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಶುದ್ಧಗೊಳಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಸ್ಲಿಂ ಯುವಕ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಮೆಟ್ಟಿಲುಗಳನ್ನು ಗೋಮೂತ್ರದಿಂದ ಶುದ್ಧಗೊಳಿಸಿದ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಬಜರಂಗದಳ ಕಾರ್ಯಕರ್ತರು ಗೋಮೂತ್ರ ಸಿಂಪಡಿಸುವ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ತಡೆಯಲು ಮುಂದಾದರು. ಇದರಿಂದ ಕೆಲ ‌ಸಮಯ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು. ವಿಶ್ವ ಹಿಂದೂ ಪರಿಷತ್ ಬಜರಂಗದಳ ಜಿಲ್ಲಾ ಅಧ್ಯಕ್ಷ ವಾಸುದೇವ್, ರಾಜೇಶ್ ಗೌಡ, ನಾಗೇಶ್ ಇದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*